ಸಾರಾಂಶ
ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ಮಂಗಳವಾರ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಕಾಕದ ಈಶ್ವರ ಪರಶುರಾಮ ರಾಮಗಾನಟ್ಟಿ, ಮೂಡಲಗಿಯ ರಾಘವೇಂದ್ರ ಯಮನಪ್ಪ ಬನಾಪ್ಪಗೋಳ, ಜಮಖಂಡಿಯ ರಮೇಶ ಮಾರುತಿ ಕಾಂಬಳೆ, ಸಚಿನ್ ರಾಮಪ್ಪ ಕಾಂಬಳೆ ಬಂಧಿತ ಆರೋಪಿಗಳು. ಇನ್ನೂಳಿದವರ ಬಂಧನಕ್ಕಾಗಿ ವಿಶೇಷ ತಂಡ ರಚಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಘಟಪ್ರಭಾ
ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ಮಂಗಳವಾರ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಕಾಕದ ಈಶ್ವರ ಪರಶುರಾಮ ರಾಮಗಾನಟ್ಟಿ, ಮೂಡಲಗಿಯ ರಾಘವೇಂದ್ರ ಯಮನಪ್ಪ ಬನಾಪ್ಪಗೋಳ, ಜಮಖಂಡಿಯ ರಮೇಶ ಮಾರುತಿ ಕಾಂಬಳೆ, ಸಚಿನ್ ರಾಮಪ್ಪ ಕಾಂಬಳೆ ಬಂಧಿತ ಆರೋಪಿಗಳು. ಇನ್ನೂಳಿದವರ ಬಂಧನಕ್ಕಾಗಿ ವಿಶೇಷ ತಂಡ ರಚಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ನೀಲಪ್ಪ ಅಂಬಿ (48) ಅವರನ್ನು ಆರೋಪಿಗಳು ಅಪಹರಣ ಮಾಡಿ ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಬಳಿಕ ಉದ್ಯಮಿಯ ಪತ್ನಿಗೆ ಕರೆ ಮಾಡಿದ್ದ ಆರೋಪಿಗಳು, ನಿನ್ನ ಗಂಡನನ್ನು ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ನಂತರ ಬಸವರಾಜ ಪತ್ನಿ ಶೋಭಾ ಅಂಬಿ ಅವರು ಘಟಪ್ರಭಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಹರಣಕಾರರಿಗೆ ಶೋಧ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ ಅಂಬಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಸವರಾಜ ಅವರನ್ನು ರಕ್ಷಣೆ ಮಾಡುವಲ್ಲಿ ನಿಪ್ಪಾಣಿ ಮತ್ತು ಮೂಡಲಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆಯಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
- ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ