ಲೈಬ್ರೆರಿಗಳಿಗೆ ಕನ್ನಡ ಪುಸ್ತಕಸಗಟು ಖರೀದಿಸಿ : ಎಚ್‌ಡಿಕೆ

| N/A | Published : Nov 02 2025, 02:45 AM IST

HD Kumaraswamy

ಸಾರಾಂಶ

ಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ. ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

 ಬೆಂಗಳೂರು :  ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ

ಕಳೆದ 4-5 ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬುದು ಮಾಧ್ಯಮಗಳ ಮುಖಾಂತರ ತಮ್ಮ ಗಮನಕ್ಕೆ ಬಂದಿದೆ. ಅನೇಕ ಪ್ರಕಾಶಕರು ಈ ವಿಷಯದ ಬಗ್ಗೆ ನನ್ನ ಗಮನ ಸೆಳೆದಿದ್ದಾರೆ. 

ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು

ನಾಡಿನಲ್ಲಿ ಓದುವ ಸಂಸ್ಕೃತಿ ಬೆಳೆಯಬೇಕು. ಯುವ ಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಓದಿನ ಸಂಸ್ಕೃತಿ ಉತ್ತೇಜಿಸುವ ಕೆಲಸ ಎಲ್ಲರೂ ಸೇರಿ ಮಾಡಬೇಕಿದೆ. ವಿಫುಲವಾಗಿ ಬೆಳೆದಿರುವ ಕನ್ನಡ ಸಾಹಿತ್ಯವನ್ನು ಮಾತೃ ಪ್ರೀತಿಯಿಂದ ನೋಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದ್ದಾರೆ.

ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಆಗಬೇಕಿದೆ. ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಂಡು ಕನ್ನಡ ಪುಸ್ತಕಗಳ ಸಗಟು ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

Read more Articles on