ಸಾರಾಂಶ
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಇಷ್ಟವಾಗಿದೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಹಿರಿಯೂರು
ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಪಡೆದಿದ್ದರಿಂದ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಬಿಇಒ ಸರ್ಕಲ್ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಇಷ್ಟವಾಗಿದೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಗ್ಯಾರಂಟಿ ಯೋಜನೆಗಳು ಜನರ ಮನದಲ್ಲಿ ಗೆಲುವು ಪಡೆದಿವೆ. ಮತ್ತೆರಡು ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬಂದದ್ದು ಆಡಳಿತ ಪಕ್ಷದ ಕಾರ್ಯವೈಖರಿ ಸರಿದಾರಿಯಲ್ಲಿದೆ ಎಂಬುದರ ಸಂಕೇತವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಾoತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ನಗರಸಭೆ ಅಧ್ಯಕ್ಷ ಅಜ್ಜಪ್ಪ, ಉಪಾದ್ಯಕ್ಷೆ ಅಂಬಿಕಾ ಆರಾಧ್ಯ, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶಬಾಬು, ಅಂಜಿನಪ್ಪ, ಗಿಡ್ಡೋಬನಹಳ್ಳಿ ಅಶೋಕ್, ಅಯೂಬ್, ವಿ. ಶಿವಕುಮಾರ್ ಮುಂತಾದ ಮುಖಂಡರು ಉಪಸ್ಥಿತರಿದ್ದರು.ಚಿತ್ರ 1 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಇಒ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.