ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

| Published : May 11 2024, 12:36 AM IST

ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗನ್ ಹೌಸ್ ವೃತ್ತದ ಬಳಿ ಬಸವೇಶ್ವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಪುಷ್ಪಾರ್ಚನೆ

ಕನ್ನಡಪ್ರಭ ವಾರ್ತೆ ಮೈಸೂರು

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಬಸವಣ್ಣ ಮತ್ತು ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಶುಕ್ರವಾರ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗನ್ ಹೌಸ್ ವೃತ್ತದ ಬಳಿ ಬಸವೇಶ್ವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮೊದಲಾದವರು ಇದ್ದರು.