ಸಾರಾಂಶ
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಭಾಗದಲ್ಲಿ ಡೆಂಘೀ ಕಾಯಿಲೆ ಉಲ್ಭಣವಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಶಿರಾಳಕೊಪ್ಪ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಭಾಗದಲ್ಲಿ ಡೆಂಘೀ ಕಾಯಿಲೆ ಉಲ್ಭಣವಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಅನಾರೋಗ್ಯ ಪೀಡಿತ ಜನರಿಗೆ ಉತ್ತಮ ಸೇವೆಯನ್ನು ವೈದ್ಯರು ನೀಡಬೇಕು. ಅನಾವಶ್ಯಕವಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಬಾರದು. ಸಾಧ್ಯವಾದಷ್ಟು ಸರ್ಕಾರಿ ಆಸ್ಪತ್ರೆಯಲ್ಲಿಯೇ ಬಡವರಿಗೆ ಚಿಕಿತ್ಸೆ ನೀಡಬೇಕು. ಆರೋಗ್ಯ ಸಿಬ್ಬಂದಿ ಜನರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ಮಾಡಿದರೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.ಅನಾರೋಗ್ಯ ಪೀಡಿತರನ್ನು ಮಾತನಾಡಿಸಿ, ಆಸ್ಪತ್ರೆಯಲ್ಲಿ ಲಭಿಸುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ನಂತರ ನೂತನವಾಗಿ ನಿರ್ಮಾಣವಾಗುತ್ತಿರುವ 50 ಹಾಸಿಗೆ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ, ಆಸ್ಪತ್ರೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಪಟ್ಟಿ ಹಾಗೂ ಅವಶ್ಯಕತೆ ಇರುವ ಸಿಬ್ಬಂದಿ ಪಟ್ಟಿ ನೀಡಿ, ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ವೈದ್ಯಾಧಿಕಾರಿಗಳಿಗೆ ತಿಳಿಸಿದರು.ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಭಾಗದಲ್ಲಿ ಡೆಂಘೀ ಕಾಯಿಲೆ ಉಲ್ಭಣವಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.