ಸಾರಾಂಶ
ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.
ಶಿವಮೊಗ್ಗ: ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.
ದಕ್ಷ ಮತ್ತು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಕುರಿತು ಸಂತೋಷ ವ್ಯಕ್ತಪಡಿಸಿ, ತಮ್ಮ ದೂರದೃಷ್ಟಿಯ ನಾಯಕತ್ವ ಮತ್ತು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ವಿಕಸಿತ ಭಾರತವನ್ನು ನಿರ್ಮಿಸುವ ತಮ್ಮ ಪ್ರಯತ್ನ ಯಶಸ್ಸಿನಿಂದ ಸಾಗಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದರು.ಜೊತೆಗೆ ಇದೇ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು 22 ಎಕರೆ 19 ಗುಂಟೆ ಜಾಗವು ಮಂಜೂರಾಗಿದ್ದು, ಈ ಜಾಗದಲ್ಲಿ ಖಾಯಂ ಆಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಹೊಂದಲು ಅನುಕೂಲವಾಗುವಂತೆ ವಿಶ್ವವಿದ್ಯಾಲಯದ ಕಟ್ಟಡ ನಿರ್ಮಾಣ, ವಸತಿ ಗೃಹಗಳು, ಕಾಂಪೌಂಡ್ ನಿರ್ಮಾಣ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲು ಸೂಕ್ತ ಅನುದಾನ ನೀಡುವಂತೆ ಕೋರಿಕೆ ಸಲ್ಲಿಸಿದರು.ಈ ಮನವಿ ಆಲಿಸಿದ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಲ್ಲದೆ, ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು ಎಂದು ಸಂಸದ ರಾಘವೇಂದ್ರ ಅವರು ತಿಳಿಸಿದರು.