ಸಾರಾಂಶ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹಿರಿಯ ನಾಯಕರು ಆತ್ಮೀಯವಾಗಿ ಸನ್ಮಾನಿಸಿ ಶುಭ ಕೋರಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ಹಿರಿಯ ನಾಯಕರು ಆತ್ಮೀಯವಾಗಿ ಸನ್ಮಾನಿಸಿ ಶುಭ ಕೋರಿದರು.ಶನಿವಾರ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಗೋವಿಂದ ಎಂ.ಕಾರಜೋಳ, ಕೋರ್ ಕಮಿಟಿ ಸದಸ್ಯ ಬಿ.ಶ್ರೀರಾಮುಲು, ವಿಧಾನಸಭೆ ಮುಖ್ಯ ಸಚೇತಕ ದೊಡ್ಡನಗೌಡ ಎಚ್.ಪಾಟೀಲ್ ಸೇರಿ ಪ್ರಮುಖ ಮುಖಂಡರು ವಿಜಯೇಂದ್ರ ಅವರನ್ನು ಸನ್ಮಾನಿಸಿ ಗೌರವಿಸಿದರು.
ವಿಜಯೇಂದ್ರ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ತಳಮಟ್ಟದಿಂದ ಪಕ್ಷ ಸಂಘಟನೆ ಬಲಪಡಿಸಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕೈಗೊಂಡ ಮೈಸೂರು ಮುಡಾ ಹಗರಣದ ಪಾದಯಾತ್ರೆ, ವಾಲ್ಮೀಕಿ ನಿಗಮದ ಹಗರಣ ಕುರಿತ ಹೋರಾಟ, ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಧರಣಿ, ಬೆಲೆ ಏರಿಕೆ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ, ಕಬ್ಬು ಬೆಳೆಗಾರರ ಹೋರಾಟ, ಎಸ್ಸಿ-ಎಸ್ಟಿ ಅನುದಾನದ ದುರ್ಬಳಕೆ ವಿರುದ್ಧ ಹೋರಾಟ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತದ ವಿರುದ್ಧ ಹೋರಾಟ ರೂಪಿಸುವಲ್ಲಿ ನೇತೃತ್ವ ವಹಿಸಿದ್ದಾರೆ.
ವಿಜಯೇಂದ್ರ ಅವರ ಯಶಸ್ವಿ ನೇತೃತ್ವದಿಂದ ಪ್ರಧಾನಿ ಮೋದಿ ಅವರ ನೆಚ್ಚಿನ ಮನ್ ಕೀ ಬಾತ್ ಕಾರ್ಯಕ್ರಮದ ಅನುಷ್ಠಾನದಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿರುವುದು ಹೆಮ್ಮೆ ತಂದಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))