ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನದ ಬಗ್ಗೆ ನೀಡಿರುವ ಹೇಳಿಕೆಯು ಕರಾವಳಿಯ ಕಲೆ ಸಂಸ್ಕೃತಿ ಮತ್ತು ಹಿಂದು ಸಮುದಾಯಕ್ಕೆ ಮಾಡಿದ ಅವಮಾನ. ಸರ್ಕಾರವು ಬಿಳಿಮಲೆ ಅವರನ್ನು ಕೂಡಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕು. ಇಲ್ಲದಿದ್ದಲ್ಲಿ ಬಿಜೆಪಿಯು ಬೀದಿಗಿಳಿದು ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದರು.ಅವರು ಬುಧವಾರ ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಬಿಳಿಮಲೆ ಅವರು ಯಕ್ಷಗಾನ ಕಲಾವಿದರು ಸಲಿಂಗಕಾಮಿಗಳು ಎಂದಿದ್ದಾರೆ. ಈ ಹೇಳಿಕೆ ಕೇವಲ ಯಕ್ಷಗಾನ ಕಲಾವಿದರಿಗೆ ಮಾಡಿದ ಅವಮಾನ ಅಲ್ಲ, ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅವಮಾನ. ಕಾಂಗ್ರೆಸ್ ಮನಸ್ಥಿತಿ ಏನು ಅನ್ನೋದನ್ನು ಇದು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ಸರ್ಕಾರಕ್ಕೆ ಕರಾವಳಿಯ ಕಲೆ, ಸಂಸ್ಕೃತಿ ಬಗ್ಗೆ ಗೌರವ ಇದ್ದಲ್ಲಿ ಕನ್ನಡ ಪ್ರಾಧಿಕಾರ ಅಧ್ಯಕ್ಷರನ್ನು ತಡ ಮಾಡದೆ ಕಿತ್ತು ಬಿಸಾಕಬೇಕು, ಪಕ್ಷಾತೀತವಾಗಿ ಇದರ ವಿರುದ್ಧ ಹೋರಾಟ ಮಾಡಬೇಕು ಎಂದರು.
ಭ್ರಷ್ಟಾಚಾರದಲ್ಲಿ ಮುಳುಗಿದ ಸರ್ಕಾರ:ಸಿಎಂ ಕುರ್ಚಿಗೆ ಕಿತ್ತಾಟ, ಹಗ್ಗ ಜಗ್ಗಾಟ ನಡೆಯುತ್ತಿದೆ. ರಾಜ್ಯದ ಜನ ಕಾಂಗ್ರೆಸ್ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದರು.
ರಾಜ್ಯದ ರೈತರು, ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಮೆಕ್ಕೆ ಜೋಳ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ, ರಾಜ್ಯ ಸರ್ಕಾರ ತಡ ಮಾಡಿದೆ ಎಂದು ಹೋರಾಟ ನಡೆಯುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಕೇವಲ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಜೋರಾಗಿದೆ. ಸಚಿವರು, ಮುಖ್ಯಮಂತ್ರಿಗಳು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಜನರ ಭರವಸೆ ಈಡೇರಿಸಿದೇ ಮೋಸ ಮಾಡಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.ಸ್ಪೀಕರ್ ಯು.ಟಿ.ಖಾದರ್, ಸತ್ಯ ಹರಿಶ್ಚಂದ್ರನ ರೀತಿ ಬಿಂಬಿಸಿಕೊಳ್ಳುತ್ತಿದ್ದಾರೆ. ವಿಶ್ವೇಶ್ವರ ಕಾಗೇರಿ ಅವರು ಖಾದರ್ ವಿರುದ್ಧ ಅನೇಕ ಆರೋಪ ಮಾಡಿದ್ದಾರೆ. ಸ್ಪೀಕರ್ ಸ್ಥಾನದ ಗೌರವ ಉಳಿಬೇಕು ಅಂದರೆ ಯು.ಟಿ. ಖಾದರ್ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))