ಮುಧೋಳ ಬಿಜೆಪಿ ವತಿಯಿಂದ ಗುರುವಾರ ಮುಧೋಳದಲ್ಲಿ ಹಮ್ಮಿಕೊಂಡಿದ್ದ ಸೇವಾ ಸಂಕಲ್ಪಅಭಿಯಾನ ಹಾಗೂ ಬೂತ್‌ ಸಂಕಲ್ಪಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವಾಗ ಲೋಕಾಪುರ-ಮುಧೋಳ ಮಾರ್ಗಮಧ್ಯೆ ತಿಮ್ಮಾಪುರದಲ್ಲಿರುವ ಮುಧೋಳ ಶ್ವಾನ ತಳಿ ಸಂಶೋಧನೆ ಮತ್ತು ಮಾಹಿತಿ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ, ಕೇಂದ್ರದ ಕಾರ್ಯಚಟುವಟಿಕೆ ವೀಕ್ಷಿಸಿದರು.

ಕನ್ನಡಪ್ರಭ ವಾರ್ತೆ ಮುಧೋಳ

ನಾಡಿನ ಹೆಮ್ಮೆಯ ದೇಸಿ ತಳಿಯಾದ ಮುಧೋಳ ಹೌಂಡ್ ಶ್ವಾನಗಳ ಶುದ್ಧ ರಕ್ತರೇಖೆ ಸಂರಕ್ಷಿಸುವ ಹಾಗೂ ತಳಿಯ ಅಭಿವೃದ್ಧಿಗೆ ಸಂಬಂಧಿಸಿದ ಸಂಶೋಧನಾ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.

2009ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಸ್ಥಾಪನೆಯಾದ ಈ ಕೇಂದ್ರ ಮುಧೋಳ ಶ್ವಾನ ತಳಿಯ ಸಂರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಮುಧೋಳ ಹೌಂಡ್‌ಗಳು ಕೇಂದ್ರ ಸರ್ಕಾರದ ಎಸ್‌ಪಿಜಿ ಪಡೆ ಹಾಗೂ ಭಾರತೀಯ ಸೇನೆ ಸೇರಿದಂತೆ ವಿವಿಧ ಭದ್ರತಾ ವ್ಯವಸ್ಥೆಗಳಲ್ಲಿ ಬಳಸಲಾಗುತ್ತಿರುವುದು ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ವಿಜಯೇಂದ್ರ ಹೇಳಿದರು.

ಚಿತ್ರದುರ್ಗದ ಸಂಸದ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ ಸೇರಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.--

ಪೊಟೋ ಅ.8ಎಂಡಿಎಲ್ 1. ಮುಧೋಳ ಶ್ವಾನ ತಳಿ ಸಂಶೋಧನಾ ಕೇಂದ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಸಂಸದ ಗೋವಿಂದ ಕಾರಜೋಳ ಇತರರು ಇದ್ದರು.