ಗೋಣಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ ಬೋಪಣ್ಣ ಪುನರಾಯ್ಕೆ

| Published : Aug 01 2025, 12:30 AM IST

ಗೋಣಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ ಬೋಪಣ್ಣ ಪುನರಾಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಗೋಣಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ. ಬೋಪಣ್ಣ ಪುನರಾಯ್ಕೆಯಾಗಿದ್ದಾರೆ.

ಗೋಣಿಕೊಪ್ಪ: ಗೋಣಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿ ಸಿ.ಕೆ ಬೋಪಣ್ಣ ಪುನರಾಯ್ಕೆಯಾಗಿದ್ದಾರೆ.

ವಾಹನ ಚಾಲಕರ ಸಂಘದ ಕಚೇರಿಯಲ್ಲಿ ನಡೆದ ಮಹಾಸಭೆಯಲ್ಲಿ ಸರ್ವ ಸದಸ್ಯರ ಒಮ್ಮತದ ತೀರ್ಮಾನದಂತೆ ಆಯ್ಕೆ ನಡೆದಿದೆ.

ಸಂಘದ ಉಪಾಧ್ಯಕ್ಷರಾಗಿ ಶರತ್ ಕಾಂತ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣೇಗೌಡ, ಸಹ ಕಾರ್ಯದರ್ಶಿ ರೇಣುಕುಮಾರ್, ಕೋಶಾಧಿಕಾರಿ ವಿ.ಟಿ ವೇಣು, ಮತ್ತು ನಿರ್ದೇಶಕರಾಗಿ ಅನಿಲ್, ಅಶೋಕ್, ಕೀರ್ತಿ, ಕೃಷ್ಣ ಶ್ರೀನಿವಾಸ್, ಸುರೇಶ್, ಅನೀಶ್ ಇವರು ಆಯ್ಕೆಯಾಗಿದ್ದಾರೆ.

-------------------------

ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಸೆಪ್ಟೆಂಬರ್,30 ಕೊನೆಯ ದಿನವಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ನೋಡಬಹುದು. ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.inದೂ.ಸಂ.08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಹಾಗೆಯೇ ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.