ಕೆಲವು ಯುವಕರು ಕ್ರೀಡೆಯ ಮೂಲಕ ಬೆಟ್ಟಿಂಗ್ ಕಟ್ಟಿ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವ ಸಮುದಾಯ ಬೆಟ್ಟಿಂಗ್ ದಂಧೆಯಿಂದ ದೂರ ಸರಿದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ನಿಪ್ಪು ವಾರಿಯರ್ ಸೀಜನ್- 2 ವತಿಯಿಂದ ನಡೆದ ಪಾಂಡವಪುರ ಪ್ರೀಮಿಯರ್ ಲೀಗ್ ಸೀಜನ್- 2 ಕ್ರಿಕೆಟ್ ಪಂದ್ಯಾವಳಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಕ್ರಿಕೆಟ್ ಪಂದ್ಯಾವಳಿಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಖ್ಯಾತಿ ಪಡೆದುಕೊಳ್ಳುತ್ತಿವೆ. ಆದರೆ, ಯುವಕರು ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳಬೇಕು, ಅದನ್ನು ಬಿಟ್ಟು ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಕೆಲವು ಯುವಕರು ಕ್ರೀಡೆಯ ಮೂಲಕ ಬೆಟ್ಟಿಂಗ್ ಕಟ್ಟಿ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವ ಸಮುದಾಯ ಬೆಟ್ಟಿಂಗ್ ದಂಧೆಯಿಂದ ದೂರ ಸರಿದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸಾಕಷ್ಟು ಉತ್ತಮ ಪರಿಣಾಮ ಬೀರಲಿದೆ. ಹಾಗಾಗಿ ಪ್ರತಿಯೊಬ್ಬ ಯುವಕರು ಕ್ರೀಡೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಪಂದ್ಯಾವಳಿಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ 18ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದರು. ಮೂರು ದಿನಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸುವ ತಂಡಕ್ಕೆ ₹1 ಲಕ್ಷ , ದ್ವಿತೀಯ ಸ್ಥಾನಕ್ಕೆ ₹50 ಸಾವಿರ ಹಾಗೂ ತೃತೀಯ ಸ್ಥಾನಕ್ಕೆ ₹30 ಸಾವಿರ ಬಹುಮಾನ ದೊರೆಯಲಿದೆ.ಸಮಾರಂಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಆರ್.ಸೋಮಶೇಖರ್, ಆಯೋಜಿಕರಾದ ನಿಪ್ಪು, ಹೇಮಂತ್, ಮೇಘರಾಜ್, ವರದ, ಮಂಜು, ನವೀನ್, ಬಾಬು, ಜೆಡಿಎಸ್ ಮುಖಂಡರಾದ ಬಿ.ಎಸ್.ಜಯರಾಮು, ಗುರು ಸೇರಿದಂತೆ ಹಲವರು ಹಾಜರಿದ್ದರು.