ಸಾರಾಂಶ
ಚಿಕ್ಕಮಗಳೂರು, ಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್‌ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆಗ್ರಹಿಸಿದ್ದಾರೆ.
ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್‌ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತಿಚೇಗೆ ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ಚಿಕ್ಕಮಗಳೂರು ತಾಲೂಕು ಕೆಡಿಪಿ ಸಭೆಯಲ್ಲಿ ಸಿ.ಟಿ. ರವಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.ಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್‌ಗಳನ್ನು ನಕ್ಸಲೀಯರು ತಮ್ಮ ಚಟುವಟಿಕೆ ವಿಸ್ತರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದರು. ಅಲ್ಲಿ ತಮ್ಮ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ಇದು, ಹಾಸ್ಟಲ್‌ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಮಾಡಿರುವ ಅವಮಾನ ಎಂದರು.
ಕಳೆದ ಇಪ್ಪತ್ತು ವರ್ಷಗಳ ಕಾಲ ಶಾಸಕರು, ಸಚಿವರಾಗಿದ್ದರು. ಅವರ ಕಾಲದಲ್ಲಿ ಈ ಸಂಬಂಧ ಏಕೆ ತನಿಖೆ ನಡೆಸಲಿಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನಕ್ಸಲ್ ಪಟ್ಟಕಟ್ಟಲು ಮುಂದಾಗಿದ್ದಾರೆ. ಹಾಗಾಗಿ ಕೂಡಲೇ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ವಸಂತಕುಮಾರ್, ಸಂತೋಷ್, ನಟರಾಜ್, ಪುಟ್ಟಸ್ವಾಮಿ ಹಾಗೂ ಅಣ್ಣಯ್ಯ ಇದ್ದರು.ಪೋಟೋ ಫೈಲ್ ನೇಮ್ 22 ಕೆಸಿಕೆಎಂ 2
)
;Resize=(128,128))
;Resize=(128,128))
;Resize=(128,128))
;Resize=(128,128))