ಸಾರ್ವಜನಿಕರು ದೂರು ಸಲ್ಲಿಸಲು ಸಿ-ವಿಜಿಲ್ ಮೊಬೈಲ್ ಆ್ಯಪ್‌ಗಳ ನೆರವು

| Published : Mar 18 2024, 01:46 AM IST

ಸಾರ್ವಜನಿಕರು ದೂರು ಸಲ್ಲಿಸಲು ಸಿ-ವಿಜಿಲ್ ಮೊಬೈಲ್ ಆ್ಯಪ್‌ಗಳ ನೆರವು
Share this Article
  • FB
  • TW
  • Linkdin
  • Email

ಸಾರಾಂಶ

ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಗಳು ಕಂಡುಬಂದಲ್ಲಿ ಫೋಟೋ, ವಿಡಿಯೋ ಮುಖಾಂತರ ದೂರು ದಾಖಲಿಸಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ೧೦೦ ನಿಮಿಷಗಳೊಳಗೆ ಇತ್ಯರ್ಥಪಡಿಸುವುದು.

ಕನ್ನಡಪ್ರಭ ವಾರ್ತೆ ಮಂಡ್ಯಚುನಾವಣಾ ಸಂಬಂಧಿತ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಲು ಚುನಾವಣಾ ಆಯೋಗವು ಸಿ-ವಿಜಿಲ್ ಮೊಬೈಲ್ ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಈ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಗಳು ಕಂಡುಬಂದಲ್ಲಿ ಫೋಟೋ, ವಿಡಿಯೋ ಮುಖಾಂತರ ದೂರು ದಾಖಲಿಸಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ೧೦೦ ನಿಮಿಷಗಳೊಳಗೆ ಇತ್ಯರ್ಥಪಡಿಸುವುದು. ದೂರು ಬಂದ ಸಮೀಪದಲ್ಲಿರುವ ತಂಡಕ್ಕೆ ಕಂಟ್ರೋಲ್ ರೂಂನಿಂದ ಮಾಹಿತಿ ರವಾನೆಯಾಗಲಿದೆ. ತಕ್ಷಣವೇ ಅವರು ಕಾರ್ಯೋನ್ಮುಖರಾಗಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ನಡೆಸಲು, ಚುನಾವಣಾ ಪ್ರಚಾರ ಕಾರ್ಯಗಳಿಗೆ ಅನುಮತಿ ಪಡೆಯಲು ಸುವಿಧ ಆ್ಯಪ್ ಮೂಲಕ ಅನುಮತಿ ಪಡೆಯಬಹುದು. ಜಿಲ್ಲಾಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ತಾಲೂಕು ಮಟ್ಟದಲ್ಲಿ ಸಹಾಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬಹುದು. ಅರ್ಜಿಗಳ ಶೀಘ್ರ ವಿಲೇವಾರಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ೬೩೪ ಆಯುಧಗಳಿಗೆ ಪರವಾನಗಿ ನೀಡಲಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಲು ಸೂಚಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ದು-ಗುಂಡು, ಸ್ಫೋಟಕಗಳನ್ನು ಸಾಗಿಸದಂತೆ ಎಚ್ಚರಿಕೆ ನೀಡಲಾಗಿದೆ.