ಹುಣಸೂರು ನಾಲೆಗಳ ಆಧುನೀಕರಣಕ್ಕಾಗಿ 139.85 ಕೋಟಿ ರು. ಗಳ ಸಂಪುಟದಿಂದ ಅನುಮೋದನೆ

| Published : Aug 08 2025, 01:00 AM IST

ಸಾರಾಂಶ

ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗೆ 49.85 ಕೋಟಿ ರು. ಹಾಗೂ ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ಕಾಮಗಾರಿಗೆ ರು. 90 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರುತಾಲೂಕಿನ ನಾಲೆಗಳ ಆಧುನೀಕರಣ ಹಾಗೂ ದುರಸ್ತಿಗಾಗಿ 139.85 ಕೋಟಿ ರು. ಗಳಿಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿರುವುದಕ್ಕೆ ಶಾಸಕ ಜಿ.ಡಿ. ಹರೀಶ್ ಗೌಡ ಅಭಿನಂದಿಸಿದ್ದಾರೆ.ತಾಲೂಕಿನ ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗೆ 49.85 ಕೋಟಿ ರು. ಹಾಗೂ ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ಕಾಮಗಾರಿಗೆ ರು. 90 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.ಶಾಸಕರ ಅಭಿನಂದನೆ- ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಮತ್ತು ಮರೂರು ನಾಲಾ ಭಾಗದ ರೈತರಿಗೆ ನೀರಾವರಿ ಕಲ್ಪಿಸುವ ಸಂಬಂಧ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ನೀಡಲಾಗಿತ್ತು. ಈ ಸಂಬಂಧವಾಗಿ ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ 139.85 ಕೋಟಿ ರು. ಗಳ ಅನುಮೋದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹುಣಸೂರು ತಾಲೂಕಿನ ಜನತೆಯ ಪರವಾಗಿ ಶಾಸಕ ಜಿ.ಡಿ. ಹರೀಶ್ ಗೌಡ ಅಭಿನಂದಿಸಿದ್ದಾರೆ.