ಮಾರ್ಚ್‌ನಲ್ಲಿ ಸಚಿವ ಸಂಪುಟ ಸಭೆ: ಐಜಿಪಿ ಬೋರಲಿಂಗಯ್ಯ ಪರಿಶೀಲನೆ

| Published : Feb 26 2025, 01:04 AM IST

ಸಾರಾಂಶ

ಹನೂರು ಮಲೆಮಾದೇಶ್ವರ ಬೆಟ್ಟಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಮಾದೇಶ್ವರನ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ಹನೂರುಮಲೆಮಹದೇಶ್ವರ ಬೆಟ್ಟಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಮಾದೇಶ್ವರನ ದರ್ಶನ ಪಡೆದು ಸಚಿವ ಸಂಪುಟ ನಡೆಯುವ ಸ್ಥಳ ಪರಿಶೀಲನೆ ನಡೆಸಿದರು.

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಶ್ರೀ ಕ್ಷೇತ್ರದಲ್ಲಿ ಸಚಿವ ಸಂಪುಟ ಸಭೆ ನಡೆಯುವ ಸಂಬಂಧ ಮಲೆ ಮಾದೇಶ್ವರ ಬೆಟ್ಟದಲ್ಲಿ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮಾದೇಶ್ವರನ ದರ್ಶನ ಪಡೆದ ಐಜಿಪಿ: ಸೋಮವಾರ ಮಾದೇಶ್ವರ ಬೆಟ್ಟಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಮಾದೇಶ್ವರನ ದರುಶನ ಪಡೆದರು.

ವಿವಿಧಡೆ ಭೇಟಿ, ಪರಿಶೀಲನೆ:

ಮಲೆಮಾದೇಶ್ವರ ಬೆಟ್ಟದಲ್ಲಿ ಮಾರ್ಚ್ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ಐಜಿಪಿ ಬೋರಲಿಂಗಯ್ಯ ಭೇಟಿ ನೀಡಿ ಮಾದೇಶ್ವರ ಪ್ರತಿಮೆ ಸ್ಥಳ ಹಾಗೂ ಬೆಟ್ಟದ ವಿವಿಧ ಸ್ಥಳಗಳನ್ನು ಕಾಮಗಾರಿ ಪರಿಶೀಲನೆ ನಡೆಸಿದರು.

ಪೊಲೀಸ್ ಠಾಣೆಗೆ ಭೇಟಿ:

ಐಜಿಪಿ ಬೋರಲಿಂಗಯ್ಯ ಮಾದೇಶ್ವರ ಬೆಟ್ಟದ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾದೇಶ್ವರ ಬೆಟ್ಟದ ಠಾಣೆಯಲ್ಲಿ ಇರುವ ಅಧಿಕಾರಿ ಸಿಬ್ಬಂದಿ ಬಗ್ಗೆ ಮತ್ತು ಇಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದರು. ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ ಹಾಗೂ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು ಹಾಗೂ ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದರ್ ಮಾ.ಬೆಟ್ಟ ಇನ್ಸ್‌ಪೆಕ್ಟರ್ ಜಗದೀಶ್ ಸಿಬ್ಬಂದಿ ಉಪಸ್ಥಿತರಿದ್ದರು.