ನವೆಂಬರ್‌ ಬಳಿಕ ಸಂಪುಟ ವಿಸ್ತರಣೆ: ಸಚಿವ ಜಮೀರ್‌

| Published : Sep 30 2025, 01:00 AM IST

ನವೆಂಬರ್‌ ಬಳಿಕ ಸಂಪುಟ ವಿಸ್ತರಣೆ: ಸಚಿವ ಜಮೀರ್‌
Share this Article
  • FB
  • TW
  • Linkdin
  • Email

ಸಾರಾಂಶ

‘ನವೆಂಬರ್‌ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ವಸತಿ, ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

- 15 ದಿನದಲ್ಲಿ ನಾಗೇಂದ್ರಗೆ ಮಂತ್ರಿಗಿರಿ

---

ಕನ್ನಡಪ್ರಭ ವಾರ್ತೆ ಬಳ್ಳಾರಿ

‘ನವೆಂಬರ್‌ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ವಸತಿ, ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಶಾಸಕ ನಾಗೇಂದ್ರ ಅವರು ಬಳ್ಳಾರಿಯವರಾಗಿದ್ದು, ಈ ಭಾಗದ ಸಮಸ್ಯೆಗಳ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇದೆ. ಅವರು ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಹೊತ್ತಿದ್ದಾರೆ. ನಾಗೇಂದ್ರ ಅವರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ್ದು, ಬಹುಶಃ ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ ಎಂದು ತಿಳಿಸಿದರು.

ಇದೇ ವೇಳೆ, ಸಿಎಂ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲ. ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.