ಉಪ ಚುನಾವಣೆಯಲ್ಲಿ ತಲೆಕೆಳಗಾದ ಬಿಜೆಪಿ - ಜೆಡಿಎಸ್‌ ಮೈತ್ರಿ ಲೆಕ್ಕಾಚಾರ : ಸಿ.ಎಸ್.ನಾಡಗೌಡ

| Published : Nov 24 2024, 01:49 AM IST / Updated: Nov 24 2024, 12:35 PM IST

Congress BJP JDS
ಉಪ ಚುನಾವಣೆಯಲ್ಲಿ ತಲೆಕೆಳಗಾದ ಬಿಜೆಪಿ - ಜೆಡಿಎಸ್‌ ಮೈತ್ರಿ ಲೆಕ್ಕಾಚಾರ : ಸಿ.ಎಸ್.ನಾಡಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಮತದಾರರಿಗೆ, ಪಕ್ಷದ ಮುಖಂಡರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

  ಮುದ್ದೇಬಿಹಾಳ:  ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿ- ಜೆಡಿಎಸ್ ಮೈತ್ರಿ ಲೆಕ್ಕಾಚಾರ ತಲೆಕೆಳಗಾಗಿದೆ. ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. 

ಸದ್ಯ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ ಮತದಾರರಿಗೆ, ಪಕ್ಷದ ಮುಖಂಡರಿಗೆ ಶಾಸಕರಿಗೆ ಅಭಿನಂದಿಸುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಈ ಬಗ್ಗೆ ಪತ್ರಿಕೆ ಜೊತೆಗೆ ಮಾತನಾಡಿದ ಅವರು, ಜನರು ತಿರಸ್ಕಾರ ಮಾಡಿದ್ದರೂ ಬಿಜೆಪಿಯವರು ವಿರೋಧ ಪಕ್ಷದಲ್ಲಿ ಕುಳಿತು ಸರ್ಕಾರ ತಪ್ಪು ದಾರಿಗೆ ಹೋಗುತ್ತಿದ್ದರೆ ತಿದ್ದಿ ಹೇಳುವ ಕೆಲಸ ಬಿಟ್ಟು ಜನರ ಭಾವನೆಗೆ ಧಕ್ಕೆ ತರಲು ಮುಂದಾಯಿತು. ಹಿಂದುಳಿದ ನಾಯಕ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಮಾಡುವ ಮೂಲಕ ರಾಜಕೀಯವಾಗಿ ಅವರನ್ನು ತುಳಿಯಲು ಮುಂದಾಯಿತು. ಆದರೆ, ಅದೇ ಅಹಿಂದ ಮತಗಳು ಒಟ್ಟಾಗಲು ಕಾರಣವಾಗಿದೆ ಎಂದರೆ ತಪ್ಪಾಗಲಾರದು. 

ಅವರ ಆರೋಪಗಳ ಮಧ್ಯೆಯೂ ಕಾಂಗ್ರೆಸ್ ಅಭೂತಪೂರ್ವ ಗೆಲುವು ಕಂಡಿರುವುದು ಜನರು ಕಾಂಗ್ರೆಸ್‌ ಮೇಲೆ ಇಟ್ಟಿರುವ ನಂಬಿಕೆ ಜೊತೆಗೆ ಮುಖ್ಯಮಂತ್ರಿ ಸಿದ್ರಾಮಯ್ಯನವರ ಪಂಚ ಗ್ಯಾರಂಟಿ ಯೋಜನೆಗಳನ್ನು ಮತದಾರರು ಮರೆಯದೇ ಬೆಂಬಲ ನೀಡಿದ್ದಾನೆ. ಉಪಸಮರ ನಡೆದ ಮೂರು ಮತ ಕ್ಷೇತ್ರದಲ್ಲಿ ಎಲ್ಲ ಜಾತಿ, ಧರ್ಮದವರು ಒಗ್ಗಟ್ಟಾಗಿ ಕಾಂಗ್ರೆಸ್‌ ಗೆಲ್ಲಿಸಿದ್ದಾಗಿ ತಿಳಿಸಿದರು.

ಆಡಳಿತದಲ್ಲಿ ಕಾಂಗ್ರೆಸ್ ಇರುವುದರಿಂದ ಸಹಜವಾಗಿ ಮೂರು ಕ್ಷೇತ್ರದ ಜನರು ಕಾಂಗ್ರೆಸ್‌ನತ್ತ ಒಲವು ತೋರಿದ್ದಾರೆ. 

ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಸುಗಮವಾಗಿ ನಡೆಯಲಿದೆ ಎಂಬ ಭಾವನೆಯೊಂದಿಗೆ ಮೂರು ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಕೈ ಹಿಡಿದ್ದಾರೆ. ಗೃಹ ಲಕ್ಷ್ಮೀ ಯೋಜನೆ, ಶಕ್ತಿ ಯೋಜನೆ ಮತದಾರರನ್ನು ಕಾಂಗ್ರೆಸ್ ನತ್ತ ಸೆಳೆಯುವಂತೆ ಮಾಡಿದೆ. ಕಾಂಗ್ರೆಸ್‌ ನಾಯಕರ ಒಗ್ಗಟ್ಟು ಪ್ರದರ್ಶನ ಉಪಸಮರದಲ್ಲಿ ಗೆಲುವಿನ ಹಾದಿ ಸುಗಮಗೊಳಿಸಿದೆ.

 ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವುದು ಗೆಲುವಿಗೆ ಪ್ರಮುಖ ಕಾರಣವಾಗಿದೆ. ಎಲ್ಲಾ ಸಚಿವರು, ಕೈ ನಾಯಕರು ಮೂರು ಕ್ಷೇತ್ರಗಳಲ್ಲಿ ಚುನಾವಣಾ ಹೊಣೆಗಾರಿಕೆ ನೀಡಿ, ಒಗ್ಗಟ್ಟಿನಿಂದ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಈಗಲಾದರೂ ಬಿಜೆಪಿಯವರು ಜಾತಿ, ಧರ್ಮಗಳ ಮದ್ಯೆ ಕೋಮುಭಾವನೆ ಮೂಡಿಸದೇ ಜನರ ವಿಶ್ವಾಸ ಗಳಿಸಿಕೊಳ್ಳಲು ಪ್ರಯತ್ನಿಸಲಿ. 

ಸಧ್ಯ ಈ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಗಳಿಸಿದ್ದರಿಂದ ಇನ್ನಷ್ಟು ಉತ್ತಮ ಆಡಳಿತ ನೀಡಲು ಶಕ್ತಿ ತುಂಬಿದಂತಾಗಿದೆ. ಮುಂದಿನ ದಿನಗಳಲ್ಲಿ ಜನರ ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಜನಪರ ಆಡಳಿತ ನೀಡುತ್ತೇವೆ. ಇದರಲ್ಲಿ ಯಾವೂದೇ ಸಂಶಯವಿಲ್ಲ ಎಂದು ಭರವಸೆ ನೀಡಿದರು.