ಮರಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿರುವ ಘಟನೆ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಪರಿಚನ ಮನೋಜ್ ಅವರಿಗೆ ಸೇರಿದ ಹಸುವಿನ ಕರುಗಳ ಮೇಲೆ ಹುಲಿ ದಾಳಿ ನಡೆಸಿದೆ.

ಮಡಿಕೇರಿ : ಮರಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿರುವ ಘಟನೆ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಪರಿಚನ ಮನೋಜ್ ಅವರಿಗೆ ಸೇರಿದ ಹಸುವಿನ ಕರುಗಳ ಮೇಲೆ ಹುಲಿ ದಾಳಿ ನಡೆಸಿದೆ.

ಹುಲಿ ದಾಳಿಯಲ್ಲಿ ಒಂದು ಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಂದು ಕರುವನ್ನು ಹುಲಿ ಎಳೆದುಕೊಂಡು ಹೋಗಿದೆ. ಇದರಿಂದ ಜಾನುವಾರು ಸಾಕಾಣಿಕೆದಾರರು ಹಾಗೂ ಸ್ಥಳೀಯ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ಮರಗೋಡು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಸಂಚಾರದ ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜಾನುವಾರುಗಳನ್ನು ಮೇಯಿಸಲು ಹಾಗೂ ತೋಟದ ಕೆಲಸಗಳಿಗೆ ತೆರಳುವವರು ಎಚ್ಚರಿಕೆ ವಹಿಸುವಂತಾಗಿದೆ.

ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಹುಲಿಯ ಚಲನವಲನ ಪತ್ತೆಹಚ್ಚಿ, ಗ್ರಾಮಸ್ಥರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.