ಸಾರಾಂಶ
ತಿಪಟೂರು : ತಾಲೂಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದಲ್ಲಿ ಚಿರತೆ ಕರುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.
ತಿಪಟೂರು : ತಾಲೂಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದಲ್ಲಿ ಚಿರತೆ ಕರುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.
ಗ್ರಾಮದ ಸಿದ್ದೇಶ್ ಎಂಬುವವರ ಹಸುವಿನ ಕರುವನ್ನು ಮನೆಯ ಮುಂದೆ ಕಟ್ಟಿಹಾಕಲಾಗಿತ್ತು. ಸಂಜೆ ಸಮಯದಲ್ಲಿ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿ ತೆಗೆದುಕೊಂಡಿದೆ. ಈ ಭಾಗದಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮಕೈಗೊಳ್ಳದ ಕಾರಣ ಚಿರತೆಗಳು ಹಸು, ಎಮ್ಮೆ, ಮೇಕೆಗಳ ಮೇಲೆ ದಾಳಿ ಮಾಡುತ್ತಿವೆ. ಮನುಷ್ಯರ ಮೇಲೆ ದಾಳಿ ಮಾಡುವ ಮುನ್ನ ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.