ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

| Published : Sep 11 2024, 01:06 AM IST

ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
Share this Article
  • FB
  • TW
  • Linkdin
  • Email

ಸಾರಾಂಶ

Call for applications for Development, Environment Journalism Awards

ಯಾದಗಿರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಪತ್ರಿಕೋದ್ಯಮದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಹೊಂದಿರುವ ಅರ್ಹ ಪತ್ರಕರ್ತರನ್ನು ಸಾರ್ವಜನಿಕರು, ಸಂಘ ಸಂಸ್ಥೆಗಳು ನಾಮ ನಿರ್ದೇಶನ ಮಾಡಬಹುದು ಅಥವಾ ವೈಯುಕ್ತಿಕವಾಗಿ ಸ್ವಯಂ ಅರ್ಜಿ ಸಲ್ಲಿಸಬಹುದು. 2017 ರಿಂದ 2023 ರ ಅವಧಿಯ ಎರಡೂ ವಿಭಾಗಗಳ ಪ್ರಶಸ್ತಿಗಳಿಗೆ ತಲಾ 7 ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡಲಾಗುವುದು. ಈ ಪ್ರಶಸ್ತಿಯ ಮೊತ್ತ ಒಂದು ಲಕ್ಷ ರು. ನಗದು ಪುರಸ್ಕಾರ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ.ಅರ್ಜಿಗಳು / ನಾಮನಿರ್ದೇಶನಗಳನ್ನು ಮಾನ್ಯ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, (ಇನ್‍ಫೆಂಟ್ರಿ ರಸ್ತೆ), ಬೆಂಗಳೂರು 560001 ಇಲ್ಲಿಗೆ ಅಥವಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸ tsraward@gmail.com ಗೆ ದಿನಾಂಕ:30-09-2024ರ ಸಂಜೆ 5.00 ಗಂಟೆಯ ಒಳಗಾಗಿ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ತಿಳಿಸಿದ್ದಾರೆ.

------