ವಿಜಯಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90 ಹಾಗೂ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಅಹ್ವಾನಿಸಲಾಗಿದೆ ಎಂದು ಮಹಾಸಭಾ ಅಧ್ಯಕ್ಷ ಈಶ್ವರ ಖಂಡ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿಯನ್ನು 2026 ಮೇ 25ರೊಳಗಾಗಿ ಮಹಾಸಭೆಯ www.aivlm.org ವೆಬ್‌ಸೆಟನಲ್ಲಿ ಆನ್‌ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸುವುದು. ಆನ್‌ಲೈನ್ ಮೂಲಕ ಬಂದ ಅರ್ಜಿಗಳನ್ನು ಮಾತ್ರ ಸ್ವೀಕರಿಸುವುದರಿಂದ ಅಂಚೆ, ಕೊರಿಯರ್‌ ಅಥವಾ ಖುದ್ದಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಮುಖ್ಯ ಆಡಳಿತಾಧಿಕಾರಿ ತೋಂಟದಾರ್ಯ ತಿಳಿಸಿದ್ದಾರೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080- 23618400, 23602177 ಅಥವಾ ಇ-ಮೇಲ್ ವಿಳಾಸ: admin@aivlm.org ಸಂಪರ್ಕಿಸಿ.