ಸಾರಾಂಶ
ಶಿಗ್ಗಾಂವಿ: ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಪಕ್ಷ ಸಂಘಟನೆ ಮಾಡಬೇಕು, ಆಕಾಂಕ್ಷಿ ಅಭ್ಯರ್ಥಿಗಳು ಒಗ್ಗಟ್ಟಾಗಿ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಹೇಳಿದರು.ತಾಲೂಕಿನ ತಡಸ ಪ್ರವಾಸಿ ಮಂದಿರದಲ್ಲಿ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಾದ ಅಡವಿಸೋಮಾಪುರ, ಮಡ್ಲಿ, ದುಂಡಶಿ ಪಂಚಾಯತಿ ಮಟ್ಟದ ಜನಪ್ರತಿನಿಧಿ, ಕಾರ್ಯಕರ್ತರ ಪ್ರತಿನಿಧಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಉಪಚುನಾವಣೆಯಲ್ಲಿ ಕಾರ್ಯಕರ್ತರು ಪ್ರತಿ ಬೂತ್‌ನ್ನು ಗೆಲ್ಲಬೇಕು, ಬೂತ್ ಮಟ್ಟದ ಅಧ್ಯಕ್ಷರು ಮತ್ತು ಸದಸ್ಯರು ಸಂಘಟಿತರಾಗಿ ಗ್ರಾಮದ ಮತದಾರ ಮನಸ್ಸನ್ನು ಗೆಲ್ಲಬೇಕು, ಆಕಾಂಕ್ಷಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಹೈಕಮಾಂಡ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಬೇಕು ಎಂದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿ, ಪಕ್ಷದ ಒಗ್ಗಟ್ಟಿಗೆ ಎಲ್ಲರೂ ಶ್ರಮಿಸಿ, ಪಕ್ಷ ನೀಡುವ ಜವಾಬ್ದಾರಿಯನ್ನು ಚಾಚು ತಪ್ಪದೇ ಮಾಡಬೇಕು ಎಂದರು.ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡಿ ಹಾಗೂ ಬೂತ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ಗಟ್ಟಿಗೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ಗಡಿ ಪ್ರದೇಶಾಭಿವೃದ್ಧಿ ಅಧ್ಯಕ್ಷ ಸೋಮಣ್ಣಾ ಬೇವಿನಮರದ, ಮಾಜಿ ಸಚಿವ ಆರ್. ಶಂಕರ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಯಾಸೀರಖಾನ ಪಠಾಣ, ರಾಜೇಶ್ವರಿ ಪಾಟೀಲ, ರಾಜು ಕುನ್ನೂರ, ಪ್ರೇಮಾ ಪಾಟೀಲ್, ಪ್ರಕಾಶ ನಿಕಂ, ಆನಂದ ಲಮಾಣಿ, ಅಸ್ಪಕಲಿ ಮತ್ತೇಖಾನ, ಬಿ .ಎಸ್. ಪಾಟೀಲ್ ಕಾರ್ಯಕರ್ತರು ಇದ್ದರು.