ಸಾರಾಂಶ
ಕ್ರೀಡೆಗಳು ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಕೆರಕಲಮಟ್ಟಿ ಪಿಕೆಪಿಎಸ್ ಅಧ್ಯಕ್ಷ ಶ್ರೀಮಂತ ಕೃಷ್ಣಗೌಡ ಎಸ್ ನಾಡಗೌಡ್ರ ಹೇಳಿದರು.
ಬಾದಾಮಿ: ಕ್ರೀಡೆಗಳು ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗಿವೆ ಎಂದು ಕೆರಕಲಮಟ್ಟಿ ಪಿಕೆಪಿಎಸ್ ಅಧ್ಯಕ್ಷ ಶ್ರೀಮಂತ ಕೃಷ್ಣಗೌಡ ಎಸ್ ನಾಡಗೌಡ್ರ ಹೇಳಿದರು.
ಅವರು ತಾಲೂಕಿನ ಕೆರಕಲಮಟ್ಟಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ತಮ್ಮ ಪ್ರತಿಭೆಗಳನ್ನು ಪ್ರದರ್ಶನ ಮಾಡಬೇಕು ಎಂದು ಹೇಳಿದರು.ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಮಾತನಾಡಿ, ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳು ತುಂಬಾ ಅವಶ್ಯಕವಾಗಿವೆ. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಭರಮಪ್ಪ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಚಂದ್ರು ಅರಸಿಕೆರೆ, ನೀರಬೂದಿಹಾಳ ಸಮೂಹ ಸಂಪನ್ಮೂಲ ವ್ಯಕ್ತಿ ಶಾರದಾ ಹುಲ್ಯಾಳ, ಪ್ರಭಾರಿ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಬಿ.ಉಳಾಗಡ್ಡಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಸವರಾಜ ಕಬಾಡದ, ಸಂಘಟನಾ ಕಾರ್ಯದರ್ಶಿ ಹನಮಂತ ಚಲವಾದಿ, ಸ್ಥಳೀಯ ಶಾಲೆಯ ಮುಖ್ಯಶಿಕ್ಷಕ ರಾಜೇಶ ಮನಗೂಳಿ, ಕಗಲಗೊಂಬ ಕ್ಲಸ್ಟರ್ ನೂತನ ಸಮೂಹ ಸಂಪನ್ಮೂಲ ವ್ಯಕ್ತಿ ಶಿವಲೀಲಾ ಮಡಿವಾಳರ ಸೇರಿದಂತೆ ಎಸ್.ಡಿ.ಎಂ.ಸಿ.ಪದಾಧಿಕಾರಿಗಳು, ಪಾಲಕರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಜರಿದ್ದರು. ಸಹಶಿಕ್ಷಕಿ ಪುಷ್ಪಲತಾ ಚವ್ಹಾಣ ಸ್ವಾಗತಿಸಿದರು. ಪ್ರಭಾರಿ ಮುಖ್ಯಶಿಕ್ಷಕ ರಾಜೇಶ ಮನಗೂಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎ.ಮನಿಯಾರ ನಿರೂಪಿಸಿದರು. ಎಸ್.ಎಸ್.ಚೌಕದ ವಂದಿಸಿದರು.