ಸಾರಾಂಶ
ತುಮಕೂರಿನಲ್ಲಲಿ ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಲು ಸೂಚಿಸಿದೆ.
ಕನ್ನಡಪ್ರಭ ವಾರ್ತೆ ತುಮಕೂರು
2022-23ನೇ ಸಾಲಿನಲ್ಲಿ ಉತ್ತೀರ್ಣರಾದ ಪದವಿ ಹಾಗೂ ಡಿಪ್ಲೋಮಾ ಪಡೆದು ನಿರುದ್ಯೋಗಿಗಳಾಗಿರುವ ಅರ್ಹ ಅಭ್ಯರ್ಥಿಗಳನ್ನು ‘ಯುವನಿಧಿ’ ಯೋಜನೆಯಡಿ ಅರ್ಜಿ ಸಲ್ಲಿಸಲು ಸಹಕರಿಸಬೇಕೆಂದು ಜಿಲ್ಲೆಯ ಪದವಿ ಹಾಗೂ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರಿಗೆ ತುಮಕೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ತಿಳಿಸಿದರು.ಯುವನಿಧಿ ಯೋಜನೆಯ ನೋಂದಣಿ ಕುರಿತು ತುಮಕೂರು ವಿಶ್ವವಿದ್ಯಾಲಯದ ಡಾ. ಸದಾನಂದಮಯ್ಯ ಕಟ್ಟಡದ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪದವಿ ಹಾಗೂ ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಟಿ.ಕೆ. ಮಾತನಾಡಿ, 2022-23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ಮುಗಿಸಿ ಉತ್ತೀರ್ಣರಾಗಿ ನಿರುದ್ಯೋಗಿಯಾಗಿರುವ ಅಭ್ಯರ್ಥಿಗಳನ್ನು ಸಂಪರ್ಕಿಸಲು ಕಾಲೇಜು ಪ್ರಾಂಶುಪಾಲರಿಗೆ ಸಾಧ್ಯವಾಗಲಿದ್ದು, ಉನ್ನತ ವ್ಯಾಸಂಗ, ಸ್ವಯಂ ಉದ್ಯೋಗ ಅಥವಾ ವಿವಿಧ ಖಾಸಗಿ ಉದ್ಯೋಗದಲ್ಲಿ ತೊಡಗಿರುವವರನ್ನು ಹೊರತುಪಡಿಸಿ ನಿಯಮಾನುಸಾರ ಅರ್ಹರಾಗಿರುವ ಎಲ್ಲಾ ಪದವಿ/ಡಿಪ್ಲೋಮಾ ನಿರುದ್ಯೋಗಿಗಳನ್ನು ‘ಯುವನಿಧಿ’ ಯೋಜನೆಯ ಸೌಲಭ್ಯ ಪಡೆಯಲು ಸೇವಾಸಿಂಧು ಜಾಲತಾಣದಲ್ಲಿ ನೋಂದಾಯಿಸಲು ಕ್ರಮವಹಿಸಬೇಕಾಗಿ ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆ ಜಿಲ್ಲಾ ಉದ್ಯೋಗಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ‘ಯುವನಿಧಿ’ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪದವಿ ಮತ್ತು ಡಿಪ್ಲೋಮಾ ಮುಗಿಸಿರುವ ನಿರುದ್ಯೋಗಿಗಳನ್ನು ನೋಂದಾಯಿಸಲು ಸಭೆಯಲ್ಲಿ ಹಾಜರಿದ್ದ ಪ್ರಾಂಶುಪಾಲರಿಗೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಮತ್ತು ಡಿಪ್ಲೋಮಾ ಕಾಲೇಜಿನ ಪ್ರಾಂಶುಪಾಲರು ಹಾಗೂ ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಹಾಜರಿದ್ದು, ವಿವಿಧ ರೀತಿಯ ಅನುಮಾನಗಳ ಕುರಿತು ಚರ್ಚಿಸಿ ಪರಿಹಾರಗಳನ್ನು ಕಂಡುಕೊಳ್ಳಲಾಯಿತು. ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳ ಬಗ್ಗೆ ಚರ್ಚಿಸಲಾಯಿತು.