ಬ್ರಾಹ್ಮಣ ಅಭಿವೃದ್ದಿ ನಿಗಮದ ಸೌಲಭ್ಯ ಉಪಯೋಗಕ್ಕೆ ಕರೆ

| Published : Jan 05 2025, 01:32 AM IST

ಸಾರಾಂಶ

ತರೀಕೆರೆ, ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯವನ್ನು ಬ್ರಾಹ್ಮಣರು ಉಪಯೋಗಿಸಿಕೊಳ್ಳಬೇಕೆಂದು ಶಿವಮೊಗ್ಗ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹೇಳಿದ್ದಾರೆ.

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಯಲ್ಲಿ ಕೆ.ಬಿ.ಪ್ರಸನ್ನಕುಮಾರ್

ಕನ್ನಡಪ್ರಭ ವಾರ್ತೆ, ತರೀಕೆರೆ

ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯವನ್ನು ಬ್ರಾಹ್ಮಣರು ಉಪಯೋಗಿಸಿಕೊಳ್ಳಬೇಕೆಂದು ಶಿವಮೊಗ್ಗ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹೇಳಿದ್ದಾರೆ.

ಶುಕ್ರವಾರ ಬ್ರಾಹ್ಮಣ ಸೇವಾ ಸಮಿತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ 132ನೇ ರಥೋತ್ಸವ ಅಂಗವಾಗಿ ಪಟ್ಟಣದ ಅನ್ನಪೂರ್ಣ ಭವನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ದೊರಕುವ ಕೈಗಾರಿಕೆ, ವಿದ್ಯಾರ್ಥಿ ವೇತನ ಇತ್ಯಾದಿ ವಿವಿಧ ಸೌಲಭ್ಯ ಪಡೆದುಕೊಳ್ಳಬೇಕು. ರಥೋತ್ಸವ ಕಾರ್ಯಕ್ರಮಗಳಲ್ಲಿ ನಿಮ್ಮೆಲ್ಲರ ಸಡಗರ ನೋಡಿದರೆ ಸಂತೋಷವಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಚಾರತ್ರಯರ ಭವನಗಳು ನಿರ್ಮಾಣವಾಗಬೇಕು ಎಂಬುದು ತಮ್ಮ ಆಶಯ ಎಂದು ಹೇಳಿದರು.

ಬೆಂಗಳೂರು ಕೈಗಾರಿಕೋದ್ಯಮಿ ಲಕ್ಷ್ಮೀ ನರಸಿಂಹಪ್ರಸಾದ್ ಮಾತನಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಬಹಳ ವಿಶೇಷ. ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅಖಂಡ ಭಜನೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಮಹತ್ವ ಪಡೆದಿದೆ ನನಗೆ ನಿಮ್ಮೆಲ್ಲರ ಆಶೀರ್ವಾದ ದೊರಕಿದೆ. ನಾವು ಸಕಾರಾತ್ಮಕವಾಗಿ ಯೋಚಿಸಬೇಕು ಎಂದು ಹೇಳಿದರು.

ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಆರ್.ಎನ್.ಶ್ರೀಧರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ಸಿಗೆ ಸರ್ವರೂ ಸಹಕರಿಸಬೇಕು ಎಂದು ಮನವಿ ಮಾಡಿದರು.ಸಮಿತಿ ಉಪಾಧ್ಯಕ್ಷ ಸಿ.ಎಸ್ ಅನಂತ ಪದ್ಮನಾಭ ಅವರು ಮಾಜಿ ಶಾಸಕ ಕೆ.ಜಿ. ಪ್ರಸನ್ನಕುಮಾರ್ ಅವರನ್ನು, ಕಾರ್ಯದರ್ಶಿ ಡಿ.ಸಿ.ಶ್ರೀನಿವಾಸಮೂರ್ತಿ ಅವರು ಬೆಂಗಳೂರು ಕೈಗಾರಿಕೋದ್ಯಮಿ ಲಕ್ಷ್ಮೀನರಸಿಂಹಪ್ರಸಾದ್ ಅವರನ್ನು, ಅರುಣ್ ಭಾರ್ಗವ ಅವರು ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ ರಾಜಾರಾಮ್ ಹೊಸಹಳ್ಳಿ ಅವರನ್ನು ಪರಿಚಯಿಸಿದರು.ಚಿಕ್ಕಮಗಳೂರು ಜಿಲ್ಲಾ ಬ್ರಾಹ್ಮಣ ಸೇವಾ ಸಮಿತಿ ಕಾರ್ಯದರ್ಶಿ ಅನಂತರಾಮಯ್ಯ, ಲಕ್ಕವಳ್ಳಿ ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷರು ಎಲ್.ಡಿ.ಸುರೇಶ್ ಹೊಯ್ಸಳ, ಶ್ರೀ ಸ್ಕಂದ ಮಾತಾ ವಿಪ್ರ ಮಹಿಳಾ ಸಂಘದ ಅಧ್ಯಕ್ಷೆ ಭಾಮಾ ಸುಬ್ರಮಣ್ಯ, ವೇ.ಬ್ರ.ಶ್ರೀ ಡಾ.ಎಚ್.ಕುಮಾರಸ್ವಾಮಿ, ಮಂಜುನಾಥ ಭಟ್ , ವಿಜಯಪ್ರಕಾಶ್, ಲಕ್ಷ್ಮೀಮಂಜುನಾಥ್, ಜ್ಯೋತಿ ಅನಂತ ಪದ್ಮನಾಭ, ಭಾಗ್ಯ ನಾಡಿಗ್ , ರೋಹಿಣಿ ನರಸಿಂಹಮೂರ್ತಿ, ಲಕ್ಷ್ಮೀ ಭಗವಾನ್ ಮತ್ತಿತರರು ಭಾಗವಹಿಸಿದ್ದರು.

ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಹೊಸಹಳ್ಳಿ ರಾಜಾರಾಮ್, ಬೆಂಗಳೂರು ವಿಧುಷಿ ಜಲಜರಾಜು ಅವರಿಂದ ಗಮಕ ವಾಚನ, ವ್ಯಾಖ್ಯಾನ, ಪ್ರತಿಭಾ ಪುರಸ್ಕಾರ, ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.

4ಕೆಟಿಆರ್.ಕೆ.1ಃ ತರೀಕೆರೆಯಲ್ಲಿ ಬ್ರಾಹ್ಮಣ ಸೇವಾ ಸಮಿತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿವಮೊಗ್ಗ ಮಾಜಿ ಶಾಸಕ ಕೆ.ಬಿ..ಪ್ರಸನ್ನಕುಮಾರ್‌ ಉದ್ಘಾಟಿಸಿದರು. ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಆರ್.ಎನ್.ಶ್ರೀಧರ್, ಸ್ಕಂದ ಮಾತಾ ವಿಪ್ರ ಮಹಳಾ ಸಂಘದ ಅಧ್ಯಕ್ಷೆ ಭಾಮಾ ಸುಬ್ರಹ್ಮಣ್ಯ ಮತ್ತಿತರರು ಇದ್ದರು.