ಸಾರಾಂಶ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಳಿಮೆ ಮಾಡಲು ಮತ್ತು ಸಾಗಾಣಿಕ ವೆಚ್ಚ ಹೆಚ್ಚಾಗಲಿದೆ, ತೆರಿಗೆ ಕಡಿಮೆ ಮಾಡಲು ಸರ್ಕಾರಕ್ಕೆ ಮನವಿ ಕಳುಹಿಸುವಂತೆ ಹಾಗೂ ಜಿಲ್ಲೆಯ ತಾಲೂಕುಗಳು ರೈತರ ಸಮಸ್ಯೆಗಳಿಗೆ ಅಧಿಕಾರಿಗಳ ಮಟ್ಟದ ಸಭೆ ಕರೆದು ಕೊರತೆಗಳ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
ಕನ್ನಡಪ್ರಭ ವಾರ್ತೆ, ಹನೂರು
ರೈತರ ಸಮಸ್ಯೆಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ನಂತರ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ಮನವಿ ಸಲ್ಲಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಳಿಮೆ ಮಾಡಲು ಮತ್ತು ಸಾಗಾಣಿಕ ವೆಚ್ಚ ಹೆಚ್ಚಾಗಲಿದೆ, ತೆರಿಗೆ ಕಡಿಮೆ ಮಾಡಲು ಸರ್ಕಾರಕ್ಕೆ ಮನವಿ ಕಳುಹಿಸುವಂತೆ ಹಾಗೂ ಜಿಲ್ಲೆಯ ತಾಲೂಕುಗಳು ರೈತರ ಸಮಸ್ಯೆಗಳಿಗೆ ಅಧಿಕಾರಿಗಳ ಮಟ್ಟದ ಸಭೆ ಕರೆದು ಕೊರತೆಗಳ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಭಿಮಾ ಫಸಲು ಯೋಜನೆ ಅಡಿ ರೈತರಿಗೆ ಸೌಲಭ್ಯವನ್ನು ನೀಡುವುದರ ಮೂಲಕ ಇತರ ಬೆಳಗು ವಿಸ್ತರಿಸಬೇಕು, ಜತೆಗೆ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಮತ್ತು ಸರ್ಕಾರಿ ಕಚೇರಿಗಳಲ್ಲಿ ರೈತರಿಗೆ ಆಗುತ್ತಿರುವ ತೊಂದರೆಯಿಂದ ನಲುಗುವತಾಂಗಿದೆ. ಕುಂದುಕೊರತೆಗಳ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.ತಾಲೂಕು ದಂಡಾಧಿಕಾರಿ ಗುರುಪ್ರಸಾದ್, ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ, ಕಾರ್ಯದರ್ಶಿ ರವಿ ನಾಯ್ಡು, ಶೈಲೇಂದ್ರ ಮತ್ತು ಹನೂರು ಘಟಕದ ಅಧ್ಯಕ್ಷ ಅಮ್ಜದ್ ಖಾನ್, ರೈತ ಮುಖಂಡರು ಇದ್ದರು.