ಪದವೀಧರ, ಶಿಕ್ಷಕರ ಕ್ಷೇತ್ರದ 6 ಸ್ಥಾನಕ್ಕೆ ಶಾಂತಯುತ ಮತದಾನ

| Published : Jun 04 2024, 01:30 AM IST / Updated: Jun 04 2024, 11:18 AM IST

voting up
ಪದವೀಧರ, ಶಿಕ್ಷಕರ ಕ್ಷೇತ್ರದ 6 ಸ್ಥಾನಕ್ಕೆ ಶಾಂತಯುತ ಮತದಾನ
Share this Article
  • FB
  • TW
  • Linkdin
  • Email

ಸಾರಾಂಶ

ವಿಧಾನಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದೆ.

  ಬೆಂಗಳೂರು :  ವಿಧಾನಪರಿಷತ್ತಿನ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದ್ದು, ಮತದಾರರು 78 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಬರೆದಿದ್ದಾರೆ.

ಸೋಮವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಮತ್ತು ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಿತು. ಈ ಆರು ಕ್ಷೇತ್ರಗಳಲ್ಲಿ ಓರ್ವ ಮಹಿಳೆ ಸೇರಿ ಒಟ್ಟು 78 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆ ಸೇರಿದೆ. ಜೂ.6ರಂದು ಫಲಿತಾಂಶ ಪ್ರಕಟವಾಗಲಿದ್ದು, ಅಭ್ಯರ್ಥಿಗಳ ಹಣೆಬರಹ ಬಹಿರಂಗವಾಗಲಿದೆ.

ಆರು ಕ್ಷೇತ್ರಗಳ ನಡೆದ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಹೆಚ್ಚಿನ ಶೇಕಡವಾರು ಮತದಾನವಾಗಿದ್ದು, ಶೇ.95.27ರಷ್ಟು ಮತದಾನವಾಗಿದೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಶೇ.69.51ರಷ್ಟು ಮತದಾನವಾಗಿದ್ದು, ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಶೇ.78.19ರಷ್ಟು ಮತದಾನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಶೇ.65.86ರಷ್ಟು ಮತದಾನವಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.82.56 ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.07ರಷ್ಟು ಮತದಾನವಾಗಿದೆ.

ಪ್ರಮುಖವಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ, ನೈಋತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ನೈಋತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ. ಮಂಜುನಾಥ್, ನೈಋತ್ಯ ಪದವಿಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ರಘುಪತಿ ಭಟ್, ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಎಸ್‌.ಎಲ್‌.ಭೋಜೇಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಸೇರಿ ಒಟ್ಟು 78 ಅಭ್ಯರ್ಥಿಗಳು ರಾಜಕೀಯ ಭವಿಷ್ಯ ಜೂ.6ರಂದು ಗೊತ್ತಾಗಲಿದೆ.

ಪದವೀಧರ ಕ್ಷೇತ್ರದಲ್ಲಿ 2,01,632 ಪುರುಷರು, 1,61,907 ಮಹಿಳೆಯರು ಹಾಗೂ 34 ಇತರರು ಸೇರಿ ಒಟ್ಟು3,63,573 ಮತದಾರರು ಇದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷರು, 31,954 ಮಹಿಳೆಯರು ಹಾಗೂ ಒಬ್ಬರು ಇತರರು ಸೇರಿ ಒಟ್ಟು 70,260 ಮತದಾರರಿದ್ದಾರೆ.

ಮತದಾನ ಪ್ರಮಾಣಆಗ್ನೇಯ ಶಿಕ್ಷಕರ ಕ್ಷೇತ್ರ- ಶೇ.95.27ದಕ್ಷಿಣ ಶಿಕ್ಷಕರ ಕ್ಷೇತ್ರ - ಶೇ.88.07

ನೈಋತ್ಯ ಶಿಕ್ಷಕರ ಕ್ಷೇತ್ರ- ಶೇ.82.56

ಈಶಾನ್ಯ ಪದವೀಧರ ಕ್ಷೇತ್ರ- ಶೇ.69.51

ನೈಋತ್ಯ ಪದವೀಧರ ಕ್ಷೇತ್ರ- ಶೇ.78.19

ಬೆಂಗಳೂರು ಪದವೀಧರ ಕ್ಷೇತ್ರ- ಶೇ.65.86