ಸಾರಾಂಶ
ತಾಲೂಕಿನ ಗುಂಡೂರು ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ ಹಾಗೂ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.
ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಕಾರಟಗಿ
ತಾಲೂಕಿನ ಗುಂಡೂರು ಗ್ರಾಮದಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನ ಹಾಗೂ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯ ಸಿಬ್ಬಂದಿ ಮನೆ ಮನೆಗೆ ತೆರಳಿ ಉದ್ಯೋಗ ಖಾತರಿಯ ಯೋಜನೆ ಕುರಿತು ವಿವರ ನೀಡಿದರು.
ತಾಪಂ ಐಇಸಿ ಸಂಯೋಜ ಸೋಮನಾಥ ಗೌಡರ್ ಮಾತನಾಡಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ೨೦೨೫-೨೬ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಪ್ರತಿಯೊಬ್ಬರು ಸಹಕಾರ ಅಗತ್ಯವಾಗಿದೆ ಎಂದರು.ನರೇಗಾದಡಿ ಯೋಜನೆ ಪ್ರತಿ ವರ್ಷದಂತೆ ನರೇಗಾ ಯೋಜನೆ ಕಾರ್ಮಿಕ ಆಯವ್ಯಯ ಕ್ರಿಯಾ ಯೋಜನೆ ಪಟ್ಟಿ ತಯಾರಿಸಲಾಗುತ್ತಿದ್ದು, ನಿಮಗೆ ಅಗತ್ಯವಿರುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸಲ್ಲಿಸಬಹುದಾಗಿದೆ. ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸುವ ಅಭಿಯಾನದಡಿ ಹಾಗೂ ಗ್ರಾಪಂ, ನ್ಯಾಯಬೆಲೆ ಅಂಗಡಿ, ಹಾಲಿನ ಕೇಂದ್ರ, ಗ್ರಂಥಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಲ್ಲಿಸಿದ ಬೇಡಿಕೆಗಳನ್ನು ವಾರ್ಡ್ ಸಭೆ ಹಾಗೂ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದು, ೨೦೨೫-೨೬ ನೇ ಸಾಲಿನ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ ಜಿಪಂಯಿಂದ ಅನುಮೋದನೆ ಪಡೆಯಲಾಗುತ್ತದೆ. ಪ್ರತಿಯೊಬ್ಬರು ಉದ್ಯೋಗ ಖಾತರಿ ನಡಿಗೆ, ಸಬಲತೆಯಡೆಗೆ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ಗ್ರಾಮ ಪಂಚಾಯಿತಿ ಬಿಎಫ್ಟಿ ಬಸವರಾಜ್ ತೊಂಡಿಹಾಳ, ರಾಜೇಶ್ವರಿ, ರಾಮಚಂದ್ರ, ಶ್ರೀಶೈಲ್ ಇದ್ದರು.