ಮರಿತಿಬ್ಬೇಗೌಡರ ಪರ ಸಚಿವರಿಂದ ವಿವಿಧ ಕಾಲೇಜುಗಳಲ್ಲಿ ಪ್ರಚಾರ

| Published : May 31 2024, 02:16 AM IST

ಮರಿತಿಬ್ಬೇಗೌಡರ ಪರ ಸಚಿವರಿಂದ ವಿವಿಧ ಕಾಲೇಜುಗಳಲ್ಲಿ ಪ್ರಚಾರ
Share this Article
  • FB
  • TW
  • Linkdin
  • Email

ಸಾರಾಂಶ

ಮರಿತಿಬ್ಬೇಗೌಡರಿಗೆ ಶಿಕ್ಷಕರ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಶಿಕ್ಷಕರ ಸಮಸ್ಯೆಗಳ ಪರ ಕೆಲಸ ಮಾಡುವ ಅರ್ಹತೆ ಹೊಂದಿದ್ದಾರೆ. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಶಿಕ್ಷಣ ಕ್ಷೇತ್ರಕ್ಕೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಇಡೀ ಕ್ಷೇತ್ರವನ್ನು ಹಾಳು ಗೆಡವಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಸಚಿವ ಎನ್.ಚಲುವರಾಯಸ್ವಾಮಿ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಪ್ರಚಾರ ನಡೆಸಿದರು.

ಪಟ್ಟಣದ ಶಿವಪುರದ ಸರ್ಕಾರಿ ಜೂನಿಯರ್ ಕಾಲೇಜು, ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆ, ಮದ್ದೂರು ಪದವಿ ಪೂರ್ವ ಕಾಲೇಜು ಸೇರಿದಂತೆ ವಿವಿಧ ಹೆಚ್ಚಿನ ಸಂಸ್ಥೆಗಳಿಗೆ ಶಾಸಕ ಕೆ.ಎಂ.ಉದಯ್ ಹಾಗೂ ಕಾಂಗ್ರೆಸ್ ಮುಖಂಡರೊಂದಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ಮರಿತಿಬ್ಬೇಗೌಡರಿಗೆ ಶಿಕ್ಷಕರ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಶಿಕ್ಷಕರ ಸಮಸ್ಯೆಗಳ ಪರ ಕೆಲಸ ಮಾಡುವ ಅರ್ಹತೆ ಹೊಂದಿದ್ದಾರೆ. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಶಿಕ್ಷಣ ಕ್ಷೇತ್ರಕ್ಕೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಇಡೀ ಕ್ಷೇತ್ರವನ್ನು ಹಾಳು ಗೆಡವಿದೆ ಎಂದು ಟೀಕಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಶಿಕ್ಷಣ ನೀತಿಯಿಂದ ಹಿಂದುಳಿದವರಿಗೆ ಭವಿಷ್ಯ ಇಲ್ಲದಂತಾಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರನ್ನು ಗೆಲ್ಲಿಸುವುದರಿಂದ ಪರಿಹಾರ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಶಾಸಕ ಕೆ.ಎಂ. ಉದಯ್ ಮಾತನಾಡಿ, ಶಿಕ್ಷಕರು ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೆ ಶಿಕ್ಷಣ ಕ್ಷೇತ್ರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮರಿತಿಬ್ಬೇಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಸ್ತೂರಿ ಅನಂತಗೌಡ, ಮುಖ್ಯ ಶಿಕ್ಷಕ ಎಚ್. ಆರ್. ಅನಂತಗೌಡ ಹಾಗೂ ಶಿಕ್ಷಕರುಗಳು ಇದ್ದರು.

ಪರಿಷತ್‌ಗೆ ಮೂರ್ನಾಲ್ಕು ಮಂದಿ ಆಕಾಂಕ್ಷಿಗಳು: ಚಲುವರಾಯಸ್ವಾಮಿಮದ್ದೂರು:

ವಿಧಾನ ಪರಿಷತ್‌ಗೆ ಆಯ್ಕೆಯಾಗಲು ಮಂಡ್ಯ ಜಿಲ್ಲೆಯಲ್ಲೂ ಸಹ ಮೂರ್ನಾಲ್ಕು ಮಂದಿ ಆಕಾಂಕ್ಷಿತರಿದ್ದಾರೆ. ಅವರುಗಳನ್ನು ಸಹ ಪರಿಗಣಿಸುವಂತೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಮನವಿ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಗುರುವಾರ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ತು ಚುನಾವಣೆಯಲ್ಲಿ ಒಂದು ವೇಳೆ ಮಂಡ್ಯ ನಾಯಕರಿಗೆ ಅವಕಾಶ ಸಿಕ್ಕರೆ ಪಕ್ಷದ ಎಲ್ಲಾ ಶಾಸಕರು ಮತ್ತು ಮುಖಂಡರು ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು.

ಆಕಾಂಕ್ಷಿತರ ಹೆಸರು ಬಹಿರಂಗ ಪಡಿಸುವಂತೆ ಸುದ್ದಿಗಾರರ ಒತ್ತಡಕ್ಕೆ ಮಣಿಯದ ಸಚಿವರು ಕಾಂಗ್ರೆಸ್ ಪಕ್ಷದ ವರಿಷ್ಠರು ಆಕಾಂಕ್ಷಿತರ ಹೆಸರನ್ನು ಕೇಳಿದರೆ ಮಾತ್ರ ಅವರ ಮುಂದೆ ಪ್ರಸ್ತಾಪ ಮಾಡುವುದಾಗಿ ತಿಳಿಸಿದರು.