ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಭಿಯಾನ

| Published : Jun 29 2024, 12:34 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ರಾಯಬಾಗ: ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಸರ್ಕಾರ ಎಲ್ಲ ಇಲಾಖೆಗಳ ಸಹಯೋಗದಲ್ಲಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಂಡಿದೆ ಎಂದು ನ್ಯಾಯವಾದಿ ಎಂ.ಎಸ್.ಪೂಜಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಬಾಗ: ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಸರ್ಕಾರ ಎಲ್ಲ ಇಲಾಖೆಗಳ ಸಹಯೋಗದಲ್ಲಿ ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಂಡಿದೆ ಎಂದು ನ್ಯಾಯವಾದಿ ಎಂ.ಎಸ್.ಪೂಜಾರಿ ಹೇಳಿದರು.

ತಾಲೂಕಿನ ಬಾವನಸವದತ್ತಿ ಗ್ರಾಮದ ಹೊಸ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಬಾಜೀರಾವ ಮಗದುಮ್ಮ ಪ್ರೌಢಶಾಲೆ ಹಾಗೂ ದಿಗ್ಗೇವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ನಿರ್ಮೂಲನಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು. 14 ವರ್ಷದೊಳಗಿನ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ವಿಶ್ವಾದ್ಯಂತ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಕಾಯ್ದೆ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ತಿಳಿಸಿದರು.ಹಿರಿಯ ವಕೀಲ ಎ.ಬಿ.ಪಡೋಲ್ಕರ್ ಮಾತನಾಡಿ, ಪ್ರತಿ ಮಗು ಶಿಕ್ಷಣ ಮತ್ತು ಮನರಂಜನೆ ಪಡೆಯುವ ಹಕ್ಕನ್ನು ಹೊಂದಿದ್ದು, ಅದರಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಪ್ರತಿ ಶಾಲೆಗಳಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ ಎಂದರು.ವಕೀಲರಾದ ಸುಧೀರ ಕಳ್ಳೆ, ಸಿಆರ್‌ಪಿ ಎಂ.ಎನ್.ತಾಶೇವಾಲೆ ಮಾತನಾಡಿದರು. ಮುಖ್ಯೋಪಾಧ್ಯಾಯ ಎಸ್.ಬಿ.ಬೇನಾಡೆ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವಕೀಲರಾದ ಡಿ.ಟಿ.ಕಾಮಗೌಡ, ಬಿ.ಡಿ.ಮಂಗಸೂಳೆ, ಸಿಆರ್ ಪಿ ವಿ.ಎನ್.ಭೋಸಲೆ, ಶಿಕ್ಷಕರಾದ ಪಿ.ಎಸ್.ನಿಡೋಣಿ, ಯು.ಎ.ಮಗದುಮ್ಮ, ವಿ.ಬಿ.ಹೊನಕಾಂಬಳೆ, ಎಸ್.ಎಸ್.ರುಪ್ಪಾಳೆ, ಡಿ.ಎಸ್.ಯಾದವಾಡೆ, ಎಸ್.ಎಸ್.ಧನವಾಡೆ, ಬಿ.ಡಿ.ಚೌಗಲಾ, ಎ.ಬಿ.ಜಮಾದಾರ, ಪಿ.ಆರ್.ಪೂಜಾರಿ ಹಾಗೂ ವಿದ್ಯಾರ್ಥಿಗಳು ಇದ್ದರು.