ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಲು ಶಿಬಿರಗಳು ಉತ್ತಮ ಅವಕಾಶ

| Published : Aug 22 2025, 12:00 AM IST

ಸಾರಾಂಶ

ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಧರ್ಮಸ್ಥಳ ಯೋಜನೆ ಒಳ್ಳೆಯ ಕೆಲಸಗಳನ್ನು, ಸೇವೆಯನ್ನು ಕೊಡುತ್ತಿದ್ದಾರೆ, ಇಂತಹ ಸೇವೆಯನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಹಕಾರ ನೀಡಬೇಕು.

ಕನ್ನಡಪ್ರಭ ವಾರ್ತೆ ಭೇರ್ಯ

ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದು ಕೆ.ಆರ್. ನಗರ ಪಟ್ಟಣದ ವಿಸ್ಮಯ ಆಸ್ಪತ್ರೆಯ ನಿರ್ದೇಶಕ ರಾಘವೇಂದ್ರ ಹೇಳಿದರು.

ಗ್ರಾಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ತಾಲೂಕು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಭೇರ್ಯ ವಲಯ ಕಾರ್ಯ ಕ್ಷೇತ್ರದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಹಾಗೂ ವಿಸ್ಮಯ ಆಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮ ಮಾಡಿದ್ದೂ ಉತ್ತಮವಾದ ಕೆಲಸ, ಧರ್ಮಸ್ಥಳ ಯೋಜನೆ ಒಳ್ಳೆಯ ಕೆಲಸಗಳನ್ನು, ಸೇವೆಯನ್ನು ಕೊಡುತ್ತಿದ್ದಾರೆ, ಇಂತಹ ಸೇವೆಯನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಹಕಾರ ನೀಡಬೇಕು, ಯೋಜನೆ ಯಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳು ಇದೆ, ಇದರ ಸದುಪಯೋಗ ಪಡೆದು ಮಹಿಳೆಯರು ಮುಂದೆ ಬರಬೇಕು ಎಂದರು.

ಜ್ಞಾನ ವಿಕಾಸ ಸಂಸ್ಥೆಯ ಸಮನ್ವಯ ಅಧಿಕಾರಿ ಅನುಷಾ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಮುಖ್ಯ ವಾಹಿನಿಗೆ ಬರುವಲ್ಲಿ ಅನೇಕ ತರಬೇತಿಗಳನ್ನು ನೀಡುತ್ತಿದ್ದು, ಸಂಪನ್ಮೂಲ ವ್ಯಕ್ತಿ ಯವರಿಂದ ಮಾಹಿತಿ ನೀಡಿ, ಸದಸ್ಯರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತೀದ್ದೇವೆ, ವಾತ್ಸಲ್ಯ ಮನೆ, ಮಾಶಾಸನ ವ್ಯವಸ್ಥೆ, ಸುಜ್ಞಾನ ನಿಧಿ, ಅರೋಗ್ಯ ವಿಮೆ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಜನ ಜಾಗೃತಿ ವೇದಿಕೆ ಸದಸ್ಯರು ಹಾಗೂ ನೌಡಗೌಡ ಕುಮಾರಸ್ವಾಮಿ ಮಾತನಾಡಿ, ಶ್ರೀ ಕ್ಷೇತ್ರದಿಂದ ಜಿಲ್ಲೆಯಲ್ಲಿ ಹಲವಾರು ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ, ಆದರೆ ಕೆಲವೊಂದು ವಿಚಾರಗಳ ಬಗ್ಗೆ ಅಪಪ್ರಚಾರವಾಗುತ್ತಿದ್ದು ಇದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ನಮ್ಮ ಗ್ರಾಮದ ಕೆಲವು ದೇವಸ್ಥಾನಕ್ಕೆ ಕ್ಷೇತ್ರದಿಂದ ಅನುದಾನ ಕೊಡಲಾಗಿದೆ. ದೇವಾಲಯಗಳು ಅಭಿವೃದ್ಧಿ ಹೊಂದಿವೆ ಎಂದರು.

ವಿಸ್ಮಯ ಆಸ್ಪತ್ರೆಯ ವೈದ್ಯರಾದ ಡಾ. ಅವಿನಾಶ್ , ಅನ್ನಪೂರ್ಣ ಕಣ್ಣಿನ ಆಸ್ಪತ್ರೆಯ ಡಾ. ಉದಯ್, ಸಿಬ್ಬಂದಿಗಳಾದ ಪವನ್, ರಂಜಿತ್, ಹರ್ಷ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಮೇಲ್ವಿಚಾರಕಿ ಪವಿತ್ರ, ಸೇವಾ ಪ್ರತಿನಿಧಿಗಳಾದ ಗೌರಿ, ಕರಿಯಮ್ಮ, ಮಹಿಳಾ ಸದಸ್ಯರು ಭಾಗವಹಿಸಿದ್ದರು.