ಗ್ರಾಮೀಣರ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ: ಕೌಲಗಿ

| Published : Jul 13 2024, 01:38 AM IST

ಗ್ರಾಮೀಣರ ಆರೋಗ್ಯ ಜಾಗೃತಿಗೆ ಶಿಬಿರಗಳು ಸಹಕಾರಿ: ಕೌಲಗಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನರು ಆರೋಗ್ಯ ಶಿಬಿರದ ಬಗ್ಗೆ ನಿರ್ಲಕ್ಷ ತೋರದೇ ಶಿಬಿರದಲ್ಲಿ ಪಾಲ್ಗೊಂಡು ವೈದ್ಯರ ಸಲಹೆ ಪಡೆಯಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಹೇಳಿದರು.

ಅಫಜಲ್ಪುರ:

ಗ್ರಾಮೀಣ ಭಾಗದ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನರು ಆರೋಗ್ಯ ಶಿಬಿರದ ಬಗ್ಗೆ ನಿರ್ಲಕ್ಷ ತೋರದೇ ಶಿಬಿರದಲ್ಲಿ ಪಾಲ್ಗೊಂಡು ವೈದ್ಯರ ಸಲಹೆ ಪಡೆಯಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ಹೇಳಿದರು.ತಾಲೂಕಿನ ಆನೂರ ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಅಫಜಲ್ಪುರ ಹಾಗೂ ಆರೋಗ್ಯ ಇಲಾಖೆ ಅವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಒತ್ತಡದ ಬದುಕಿನಲ್ಲಿ ಕೆಲವರು ಒಂದಲ್ಲ ಒಂದು ಕಾಯಿಲೆಯಲ್ಲಿ ಜೀವನ ಕಳೆಯುತ್ತಿದ್ದಾರೆ. ಸುಖಕರ ಜೀವನಕ್ಕೆ ಪ್ರತಿಯೊಬ್ಬರೂ ಮಾನಸಿಕ ನೆಮ್ಮದಿ ಕಾಯ್ದುಕೊಳ್ಳುವ ಮೂಲಕ ಆರೋಗ್ಯವಾಗಿರಲು ಪ್ರಯತ್ನಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ರಕ್ತದೊತ್ತಡ ಮಧುಮೇಹ, ಹೃದ್ರೋಗ, ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತರ ಕಾಯಿಲೆಗಳಾಗಿದ್ದು ಬಡವರಿಗೆ ಒಂದು ವೇಳೆ ಈ ಕಾಯಿಲೆಗಳು ಬಂದರೆ ಅವರು ಚಿಕಿತ್ಸೆ ಪಡೆದುಕೊಳ್ಳಲು ಅಸಾಧ್ಯವಾಗುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಡೆಂಘೀ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಗ್ರಾಮೀಣ ಪ್ರದೇಶದಲ್ಲಿ ಇಂತಹ ಆರೋಗ್ಯ ಶಿಬಿರಗಳು ಜನರಿಗೆ ಬಹಳ ಸಹಕಾರಿಯಾಗಿವೆ. ಪ್ರತಿಯೊಬ್ಬರೂ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ನಿಂಗಣ್ಣ ಪಡಶೆಟ್ಟಿ, ಉಪಾಧ್ಯಕ್ಷೆ ಅನಸುಬಾಯಿ ರಾಣಪ್ಪ, ಅಭಿವೃದ್ಧಿ ಅಧಿಕಾರಿ ಚಿದಾನಂದ ಆಲೇಗಾಂವ, ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಮಲಾ ಹಿಂಚಗೇರಾ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರಿದ್ದರು.