ಸಾರಾಂಶ
ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ವಿಭಾಗವು ದ್ವಿತೀಯ ವರ್ಷದಲ್ಲಿ ಓದುತ್ತಿರುವ ಬಿ.ಕಾಂ., ಬಿಸಿಎ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್ಮೆಂಟ್‌ಗೆ ಸಂಬಂಧಿಸಿದಂತೆ ವಿವಿಧ ವಿಷಯದ ಕುರಿತು ಐದು ದಿನದ ತರಬೇತಿ ಕಾರ್ಯಾಗಾರವನ್ನು ಫೆ.17ರಿಂದ 22ರ ವರೆಗೆ ಮಂಗಳೂರಿನ ತ್ರಸ್ಟ್ ಅಕಾಡೆಮಿಯ ಸಹಯೋಗದಲ್ಲಿ ಹಮ್ಮಿಕೊಂಡಿತ್ತು.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡ್ಲಕಟ್ಟೆ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ವಿಭಾಗವು ದ್ವಿತೀಯ ವರ್ಷದಲ್ಲಿ ಓದುತ್ತಿರುವ ಬಿ.ಕಾಂ., ಬಿಸಿಎ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್ಮೆಂಟ್‌ಗೆ ಸಂಬಂಧಿಸಿದಂತೆ ವಿವಿಧ ವಿಷಯದ ಕುರಿತು ಐದು ದಿನದ ತರಬೇತಿ ಕಾರ್ಯಾಗಾರವನ್ನು ಫೆ.17ರಿಂದ 22ರ ವರೆಗೆ ಮಂಗಳೂರಿನ ತ್ರಸ್ಟ್ ಅಕಾಡೆಮಿಯ ಸಹಯೋಗದಲ್ಲಿ ಹಮ್ಮಿಕೊಂಡಿತ್ತು.ಕಾರ್ಯಾಗಾರದಲ್ಲಿ ಗುಂಪು ಚರ್ಚೆ, ರೆಸ್ಯೂಮ್ ಬಿಲ್ಡಿಂಗ್, ಸೋಶಿಯಲ್ ಪ್ರೊಫೈಲ್ ಬಿಲ್ಡಿಂಗ್, ನೇರ ಸಂದರ್ಶನ ಹೀಗೆ ಹಲವು ತರಬೇತಿಯನ್ನು ನೀಡಲಾಯಿತು.
ಫೆ.21ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ 5 ದಿನ ತರಬೇತಿಯನ್ನು ನೀಡಿದ ತ್ರಸ್ಟ್ ಅಕಾಡೆಮಿಯ ಸ್ಥಾಪಕ ಕಾರ್ತಿಕ್ ಆಳ್ವ ಮಾತನಾಡಿ, ಕಾಲೇಜು ಕ್ಯಾಂಪಸ್ ಪ್ಲೇಸ್ಮೆಂಟ್ ತರಬೇತಿಗೆ ಸಂಬಂಧಿಸಿದಂತೆ ಪ್ರೋತ್ಸಾಹಿಸುತ್ತಿರುವ ಬಗ್ಗೆ ಶ್ಲಾಘಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಾಟೀಲ್ ಮಾತನಾಡಿ, ಕಾರ್ಯಾಗಾರದಲ್ಲಿ ಪಡೆದುಕೊಂಡ ತರಬೇತಿಯಿಂದ ಮುಂದಿನ ದಿನಗಳಲ್ಲಿ ಉದ್ಯೋಗ ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಪ್ಲೇಸ್ಮೆಂಟ್ ಆಫೀಸರ್ ಜಯಶೀಲ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ಲೇಸ್ಮೆಂಟ್ ಸಹ ಸಂಯೋಜಕರು ಹಾಗೂ ಇಂಗ್ಲಿಷ್ ಉಪನ್ಯಾಸಕರಾದ ರಾಜೇಶ್ವರಿ ಆರ್. ಶೆಟ್ಟಿ ನಿರೂಪಿಸಿದರು.