ಕಳ್ಳರು ಕೆನರಾ ಬ್ಯಾಂಕ್ ಎಟಿಎಂಗೆ ನುಗ್ಗಿ ಎಟಿಎಂನಲ್ಲಿದ್ದ ಸುಮಾರು ₹15 ಲಕ್ಷ ನಗದು ದೋಚಿಕೊಂಡು ಪರಾರಿಯಾದ ಘಟನೆ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿನ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಕಳ್ಳರು ಕೆನರಾ ಬ್ಯಾಂಕ್ ಎಟಿಎಂಗೆ ನುಗ್ಗಿ ಎಟಿಎಂನಲ್ಲಿದ್ದ ಸುಮಾರು ₹15 ಲಕ್ಷ ನಗದು ದೋಚಿಕೊಂಡು ಪರಾರಿಯಾದ ಘಟನೆ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿನ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮುಸುಕುಧಾರಿ ಕಳ್ಳರು ಗ್ಯಾಸ್ ಕಟರ್‌ನಿಂದ ಶೆಟರ್‌ ಕಟ್ ಮಾಡಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ನಿಡಗುಂದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಡಗುಂದಿ ಠಾಣೆಯ ಇನ್ಸಪೆಕ್ಟರ್‌ ಶರಣಗೌಡ ಗೌಡರ ಹಾಗೂ ಇತರೆ ಸಿಬ್ಬಂದಿ ಕೆನರಾ ಬ್ಯಾಂಕ್‌ನಲ್ಲಿನ ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲನೆ ಮಾಡಿ, ಕಳ್ಳರನ್ನು ಪತ್ತೆ ಕಾರ್ಯ ಚುರುಕುಗೊಳಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳನ್ನು ‌ಕರೆಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.