ಖ್ಯಾತ ಪತ್ರಿಕೋದ್ಯಮಿ ನವಭಾರತ ಕನ್ನಡ ದೈನಿಕ ಪತ್ರಿಕೆಯ ಸ್ಥಾಪನಾ ಸಂಪಾದಕ ಮತ್ತು ನಗರದ ಮರೋಳಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕೆನರಾ ವರ್ಕ್‌ಶಾಪ್ ಕೈಗಾರಿಕಾ ಸಂಸ್ಥೆಯ ಸ್ಥಾಪನಾಧ್ಯಕ್ಷ ದಿ.ವಿ.ಎಸ್. ಕುಡ್ವರ ೧೨೭ನೇ ವಾರ್ಷಿಕ ಜನ್ಮ ದಿನಾಚರಣೆ (ಸಂಸ್ಥಾಪಕರ ದಿನಾಚರಣೆ) ಕಾರ್ಯಕ್ರಮ ಮಂಗಳವಾರ ಅವರು ಸ್ಥಾಪಿಸಿದ ಕೆನರಾ ವರ್ಕ್‌ಶಾಪ್ ಸಂಸ್ಥೆಯ ಕೈಗಾರಿಕಾ ಸಂಕೀರ್ಣದಲ್ಲಿ ನಡೆಯಿತು.
ಮಂಗಳೂರು: ಖ್ಯಾತ ಪತ್ರಿಕೋದ್ಯಮಿ ನವಭಾರತ ಕನ್ನಡ ದೈನಿಕ ಪತ್ರಿಕೆಯ ಸ್ಥಾಪನಾ ಸಂಪಾದಕ ಮತ್ತು ನಗರದ ಮರೋಳಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕೆನರಾ ವರ್ಕ್‌ಶಾಪ್ ಕೈಗಾರಿಕಾ ಸಂಸ್ಥೆಯ ಸ್ಥಾಪನಾಧ್ಯಕ್ಷ ದಿ.ವಿ.ಎಸ್. ಕುಡ್ವರ ೧೨೭ನೇ ವಾರ್ಷಿಕ ಜನ್ಮ ದಿನಾಚರಣೆ (ಸಂಸ್ಥಾಪಕರ ದಿನಾಚರಣೆ) ಕಾರ್ಯಕ್ರಮ ಮಂಗಳವಾರ ಅವರು ಸ್ಥಾಪಿಸಿದ ಕೆನರಾ ವರ್ಕ್‌ಶಾಪ್ ಸಂಸ್ಥೆಯ ಕೈಗಾರಿಕಾ ಸಂಕೀರ್ಣದಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರೇಮನಾಥ ಕುಡ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಥಾಪಕರ ಆಡಳಿತ ಕ್ಷಮತೆ, ಕಾರ್ಯದಕ್ಷತೆ, ಕಾರ್ಯನಿರ್ವಾಹಣೆ, ಕರ್ತವ್ಯ ನಿಷ್ಠೆ ಮತ್ತು ಸಮಯ ಪಾಲನೆ ಮತ್ತು ಪತ್ರಿಕೋದ್ಯಮ (ನವಭಾರತ ಕನ್ನಡ ದೈನಿಕ ಪತ್ರಿಕೆ) ಮತ್ತು ಕೈಗಾರಿಕೋದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸಾಧನೆ ಸ್ಮರಣೀಯ. ಅವರ ಆದರ್ಶ, ದೂರದರ್ಶಿತ್ವ, ಸ್ಫೂರ್ತಿ, ನಮ್ಮ ಸಂಸ್ಥೆಗೆ ಇಂದಿಗೂ ಮಾರ್ಗದರ್ಶನ ಹಾಗೂ ನಮ್ಮ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರೇರಣೆ ಮತ್ತು ದಾರಿದೀಪವಾಗಿದೆ ಎಂದರು.ದಿ.ಕುಡ್ವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಸಂಸ್ಥಾಪಕರಿಗೆ ಗೌರವ ಸಲ್ಲಿಸಲಾಯಿತು. ಸಂಸ್ಥೆಯ ಹಿರಿಯ ಕಾರ್ಯ ನಿರ್ವಹಣಾ ಪ್ರಬಂಧಕಿ ಕಾವ್ಯ ಪಿ. ಕುಡ್ವ, ದಿ.ವಿ.ಎಸ್.ಕುಡ್ವರ ಜೀವನ ಚರಿತ್ರೆ ಕೃತಿಯ ಲೇಖಕ ವಸಂತ ಮಲ್ಯ, ಸ್ಟೇಟ್‌ಬ್ಯಾಂಕ್ ಆಫ್ ಇಂಡಿಯಾ ಕೋಡಿಯಾಲ್‌ಬೈಲ್‌ನ ಮುಖ್ಯ ಪ್ರಬಂಧಕ ಮಿಲನ್ ಗಿರಿ, ಕೆನರಾ ಬ್ಯಾಂಕ್ ಕುಲಶೇಖರ ಶಾಖೆಯ ಪ್ರಬಂಧಕ ಅಮಲ್ ಮೋಹನ್ ಮತ್ತಿತರರು ಇದ್ದರು.ಸಂಸ್ಥೆಯ ನಿವೃತ್ತ ಉಪ ಮಹಾಪ್ರಬಂಧಕ ಅಬ್ದುಲ್ ಸಲೀಂ ಅವರು ಸಂಸ್ಥೆ ಬೆಳೆದು ಬಂದ ಬಗ್ಗೆ ಮಾತನಾಡಿದರು.
ವಿ.ಎಸ್. ಕುಡ್ವ ಕಂಪ್ಯೂಟರ್ ಅಕಾಡೆಮಿಯ ಮುಖ್ಯ ತರಬೇತುದಾರ ಕೆ.ಮುಕುಂದರಾಜ ಪೈ ಅವರನ್ನು ಸನ್ಮಾನಿಸಲಾಯಿತು. ಸಿಬ್ಬಂದಿಗಳ ಪರವಾಗಿ ಸಹಾಯಕ ಮಹಾಪ್ರಬಂಧಕ ಅಕ್ಷಯ್ ಪ್ರಭು, ಹಿರಿಯ ಕಾರ್ಮಿಕರಾದ ಜಗದೀಶ್ ಸಾಲ್ಯಾನ್, ನಾಗರಾಜ್, ಕಾರ್ಮಿಕರ ಸಂಘದ ಪರವಾಗಿ ಪದಾಧಿಕಾರಿಗಳು ಸಂಸ್ಥಾಪಕರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ಕಿರಣ್ ಎಸ್. ಕುಲಾಲ್ ಸ್ವಾಗತಿಸಿ, ನಿರೂಪಿಸಿದರು. ಉತ್ಪಾದನಾ ತಾಂತ್ರಿಕಾ ತಜ್ಞ ಸುದರ್ಶನ್ ರಾವ್ ವಂದಿಸಿದರು.