ಸಾರಾಂಶ
ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್‌ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ‘ಎಂಪವರಿಂಗ್ ದ ಕಮ್ಯೂನಿಟಿ ತ್ರೂ ಕ್ಯಾನ್ಸರ್ ಅವೆರ್ ನೆಸ್ ಪ್ರೋಗ್ರಾಂ’ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಯುವ ರೆಡ್‌ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ‘ಎಂಪವರಿಂಗ್ ದ ಕಮ್ಯೂನಿಟಿ ತ್ರೂ ಕ್ಯಾನ್ಸರ್ ಅವೆರ್ ನೆಸ್ ಪ್ರೋಗ್ರಾಂ’ ಕಾರ್ಯಕ್ರಮ ಆಯೋಜಿಸಲಾಗಿತ್ತು.ನಗರದ ಹಿರಿಯ ಶಸ್ತ್ರಚಿಕಿತ್ಸಕ ಡಾ. ವೈ.ಸುದರ್ಶನ್ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಕ್ಯಾನ್ಸರ್‌ನ ಗುಣಲಕ್ಷಣಗಳು ಮತ್ತು ಆಹಾರ ಸೇವನೆಯ ಬಗ್ಗೆ ಮಾಹಿತಿ ನೀಡಿ, ಜಾಗೃತಿ ಅರಿವು ಮೂಡಿಸಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಎಸ್. ಮಾತನಾಡಿ, ವಿದ್ಯಾರ್ಥಿನಿಯರಿಗೆ ಕಾರ್ಯಕ್ರಮದ ಸದುಪಯೋಗವನ್ನು ಪಡೆಯಲು ತಿಳಿಸಿದರು. ಕಾರ್ಯಕ್ರಮದಲ್ಲಿ ಮಣಿಪಾಲ ಕೆಎಂಸಿಯ ತಜ್ಞ ವೈದ್ಯ ಡಾ. ರಾಜ್‌ಗೋಪಾಲ್ ಶೆಣೈ, ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿ, ಕ್ಯಾನ್ಸರ್ ಕಾಯಿಲೆಯನ್ನು ಮೊದಲ ಹಂತದಲ್ಲಿ ಸಂಪೂರ್ಣವಾಗಿ ಗುಣಮುಖಗೊಳಿಸಲು ಸಾಧ್ಯವಿದೆ ಎಂದರು.
ಇನ್ನೋರ್ವ ಅತಿಥಿ ಅಸೋಸಿಯೇಶನ್ಸ್ ಆಫ್ ಸರ್ಜನ್ಸ್ ಆಫ್ ಇಂಡಿಯಾ, ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಡಾ. ವಿಶ್ವೇಶ್ವರ ಮಾತನಾಡಿದರು.ಕಾರ್ಯಕ್ರಮದಲ್ಲಿ ಉಡುಪಿ ರೋಟರಿ ಕ್ಲಬ್ ಅಧ್ಯಕ್ಷೆ ದೀಪಾ ಭಂಡಾರಿ, ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಂಚಾಲಕ ಪ್ರೊ. ಶ್ರೀಧರ್ ಪ್ರಸಾದ್ ಕೆ. ಉಪಸ್ಥಿತರಿದ್ದರು. ನಿರ್ವಹಣಾಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವ್ಯಾ ಎಂ.ಎಸ್. ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅನನ್ಯ ನಿರೂಪಿಸಿದರು. ಅಂಕಿತಾ ವಂದಿಸಿದರು.