ಸಾರಾಂಶ
ದೊಡ್ಡಬಳ್ಳಾಪುರ: ಇಲ್ಲಿನ ನವೋದಯ ಚಾರಿಟಬಲ್ ಟ್ರಸ್ಟ್ ವತಿಯಿಂದ , ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಆತ್ರೇಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರಗಳ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆಯ ಪ್ರಯುಕ್ತ ಶನಿವಾರ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ದೊಡ್ಡಬಳ್ಳಾಪುರ ನಗರದ ಮುತ್ಸಂದ್ರ ಗ್ರಾಮದಲ್ಲಿ ಕಾಲ್ನಡಿಗೆ ಜಾಥವನ್ನು ಆಯೋಜಿಸಲಾಗಿತ್ತು. ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ ರಮೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಶಾರದ ಮಾತನಾಡಿ, ಸಣ್ಣ ಗಾಯ ಅಥವಾ ಗಡ್ಡೆ ರೂಪದಲ್ಲಿ ಇರುವಂತಹ ಚಹರೆಗಳನ್ನು ಪ್ರಥಮ ಹಂತದಲ್ಲೇ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಕಾಯಿಲೆಯನ್ನು ಗುಣಪಡಿಸಬಹುದು. ಮಹಿಳೆಯರು ಯಾವುದೇ ರೀತಿ ಭಯಪಡದೆ ಚಿಕಿತ್ಸೆಗೆ ಮುಂದಾಗಬೇಕು. ಆಗ ಮಾತ್ರ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಅನ್ನು ಗುಣಪಡಿಸಿಕೊಳ್ಳಬಹುದೆಂದು ತಿಳಿಸಿದರು.ನವೋದಯ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಜನಾರ್ದನ್ ಮಾತನಾಡಿ, ಇಂದಿನ ಯುವ ಪೀಳಿಗೆ ತಂಬಾಕು ಗುಟ್ಕಾ ಮುಂತಾದ ದುಶ್ಚಟಗಳಿಗೆ ಬಲಿಯಾಗಿ ಮುಂದಿನ ದಿನಗಳಲ್ಲಿ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅಷ್ಟೇ ಅಲ್ಲದೆ ಪೋಷಕರು ಕೂಡ ಸಣ್ಣ ಮಕ್ಕಳ ಕೈಗೂ ಆಟವಾಡಲು ಮೊಬೈಲ್ ಗಳನ್ನು ನೀಡಿ ಹೆಚ್ಚು ಮೊಬೈಲ್ ರೇಡಿಯೇಷನ್ ನಿಂದ ಮೆದುಳು ಕ್ಯಾನ್ಸರ್ ಗೆ ಬಲಿಯಾಗುತ್ತಿದ್ದಾರೆ. ಆದರಿಂದ ಪೋಷಕರು ಕೂಡ ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನವೋದಯ ಟ್ರಸ್ಟ್ ನ ಜಂಟಿ ಕಾರ್ಯದರ್ಶಿ ಕಾರ್ತಿಕ್ ಗೌಡ, ಕಾನೂನು ಸಲಹೆಗಾರ ಮಂಜುನಾಥ್, ಲೋಹಿತ್, ಆತ್ರೆಯ ಕಾಲೇಜಿನ ಡಾ.ಆದಿತ್ಯರವರು, ಕೊಂಗಾಡಿಯಪ್ಪ ಕಾಲೇಜಿನ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳು ಹಾಗೂ ಆತ್ರೇಯ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.24ಕೆಡಿಬಿಪಿ8-
ದೊಡ್ಡಬಳ್ಳಾಪುರದಲ್ಲಿ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಶನಿವಾರ ಕ್ಯಾನ್ಸರ್ ಜಾಗೃತಿ ಕಾಲ್ನಡಿಗೆ ಜಾಥಾ ನಡೆಯಿತು.