ನೀಡಸೊಸಿ ಮಠಕ್ಕೆ ಪಕ್ಷಗಳ ಅಭ್ಯರ್ಥಿಗಳ ದಂಡು

| Published : Mar 28 2024, 12:49 AM IST

ಸಾರಾಂಶ

ಸಂಕೇಶ್ವರ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೆ ಸಮೀಪದ ನೀಡಸೊಸಿ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠಕ್ಕೆ ರಾಜಕೀಯ ನಾಯಕರ ದಂಡು ಭೇಟಿ ನೀಡುತ್ತಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಉತ್ತರ ಕರ್ನಾಟಕ ಪ್ರಸಿದ್ಧ ಮಠಗಳಲ್ಲಿ ಒಂದಾದ ನೀಡಸೊಸಿ ದುರದುಂಡೇಶ್ವರ ಮಠಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಭೇಟಿ ನೀಡಿದ್ದರು.

ಸಂಕೇಶ್ವರ: ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೆ ಸಮೀಪದ ನೀಡಸೊಸಿ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠಕ್ಕೆ ರಾಜಕೀಯ ನಾಯಕರ ದಂಡು ಭೇಟಿ ನೀಡುತ್ತಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಉತ್ತರ ಕರ್ನಾಟಕ ಪ್ರಸಿದ್ಧ ಮಠಗಳಲ್ಲಿ ಒಂದಾದ ನೀಡಸೊಸಿ ದುರದುಂಡೇಶ್ವರ ಮಠಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ಭೇಟಿ ನೀಡಿದ್ದರು. ಇದೀಗ ಸಚಿವ ಸತೀಶ ಜಾರಕಿಹೋಳಿ ಪುತ್ರಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಮಂಗಳವಾರ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ ಶಿವಲಿಂಗೇಶ್ವರ ಮಹಾಸ್ವಾಮೀಜಿಯವರ ಹಾಗೂ ಉತ್ತರಾಧಿಕಾರಿ ನಿಜಲಿಂಗೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಲೋಕಸಭಾ ಚುನಾವಣೆ ಹಿನ್ನೆಲೆ ನೀಡಸೊಸಿ ಮಠಕ್ಕೆ ರಾಜಕೀಯ ನಾಯಕರು ಆಗಮಿಸುತ್ತಿದ್ದು, ಸ್ವಾಮೀಜಿಗಳ ಆಶಿರ್ವಾದ ಪಡೆಯುತ್ತಿದ್ದಾರೆ.