ಸಾರಾಂಶ
Cannabis consumption: Case registered
ಭದ್ರಾವತಿ: ನಗರದ ಎಂಪಿಎಂ ಬಡಾವಣೆಯಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿ ಅಮಲಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಎಚ್.ಪಿ ವಿಕ್ರಮ್ ಮಾ.೧೧ರಂದು ಗಸ್ತಿನಲ್ಲಿದ್ದಾಗ ಮಧ್ಯಾಹ್ನ ೨.೪೫ ಸಮಯದಲ್ಲಿ ಎಂಪಿಎಂ ಬಡಾವಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಅಮಲಿನಲ್ಲಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆತನನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎನ್ನಲಾಗಿದೆ.
---