Canter-car collision: Driver dies

ಶಿರಾಳಕೊಪ್ಪ: ಶಿರಾಳಕೊಪ್ಪ ಸಮೀಪದ ಜಾವಗಟ್ಟಿ ಮತ್ತು ಬಳ್ಳಿಗಾವಿ ನಡುವಿನ ರಸ್ತೆಯಲ್ಲಿ ಶುಕ್ರವಾರ ಕ್ಯಾಂಟರ್ ಹಾಗೂ ಮಾರುತಿ- 800 ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತರನ್ನು ಉದ್ರಿ ವಡ್ಡಿಗೆರಿ ಗ್ರಾಮದ ಲಿಂಗರಾಜ್ (20) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.