ಸಾರಾಂಶ
ಕ್ಯಾಂಟರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಾಬಸ್‍ಪೇಟೆ: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು- ಬೆಂಗಳೂರು ರಸ್ತೆಯ ಬೂದಿಹಾಳ ಗ್ರಾಮದ ಬಳಿ ನಡೆದಿದೆ. ತ್ಯಾಮಗೊಂಡ್ಲು ಹೋಬಳಿಯ ತಿಪ್ಪಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಟಿ.ಎ.ನರಸಿಂಹಮೂರ್ತಿ (51) ಮೃತ ದುರ್ದೈವಿ. ಇವರು ಕಳೆದ 5 ವರ್ಷದಿಂದ ನೆಲಮಂಗಲ ತಾಲೂಕು ಆರ್ ಡಿಪಿಆರ್ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮವಾರ ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಮನೆಗೆ ತೆರಳುವಾಗ ಬೂದಿಹಾಳ ಬಳಿ ಕ್ಯಾಂಟರ್ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ನರಸಿಂಹಮೂರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕ್ಯಾಂಟರ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.