ತಿರುವಿನಲ್ಲಿ ವೇಗವಾಗಿ ಮರಕ್ಕೆ ಅಪ್ಪಳಿಸಿದ ಕಾರು, ಇಬ್ಬರ ಬಲಿ

| Published : Feb 19 2025, 01:15 AM IST

ಸಾರಾಂಶ

ತಿರುವಿನಲ್ಲಿ ಅತಿವೇಗವಾಗಿ ವಾಹನ ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನ್ನೇರುಘಟ್ಟ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

*ಬನ್ನೇರುಘಟ್ಟ ಮುಖ್ಯರಸ್ತೆ ಟಿ-ಜಾನ್‌ ಕಾಲೇಜಿನ ವಿದ್ಯಾರ್ಥಿಗಳು

*ಕೇರಳ ಮೂಲದ ವಿದ್ಯಾರ್ಥಿಗಳಿಂದ ಮಧ್ಯರಾತ್ರಿ ಜಾಲಿ ರೈಡ್

*ತಿರುವಿನಲ್ಲಿ ಅತೀ ವೇಗವಾಗಿ ಕಾರು ಚಲಾಯಿಸಿದ ವಿದ್ಯಾರ್ಥಿಗಳು

*ನಿಯಂತ್ರಣ ಸಿಗದೇ ಮರಕ್ಕೆ ಅಪ್ಪಳಿಸಿದ ಕಾರು, ಇಬ್ಬರ ಸಾವುಕನ್ನಡಪ್ರಭ ವಾರ್ತೆ ಬೆಂಗಳೂರು ದಕ್ಷಿಣ

ತಿರುವಿನಲ್ಲಿ ಅತಿವೇಗವಾಗಿ ವಾಹನ ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನ್ನೇರುಘಟ್ಟ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬನ್ನೇರುಘಟ್ಟದ ರಾಗಿಹಳ್ಳಿ ಬಳಿಯಲ್ಲಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಟಿ-ಜಾನ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೇರಳ ಮೂಲದ ಸಹಾಹುಕ್ (27) ಅರ್ಶ್.ಎ.ಬಷಿರ್ (22) ಸ್ಥಳದಲ್ಲೇ ಸಾವಿಗೀಡಾದ ವಿದ್ಯಾರ್ಥಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ದೇವನಾರಾಯಣ ಮತ್ತು ಸಾಹಿಲ್‌ನನ್ನು ಅರಕೆರೆ ಮಿಂಟೋ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ಜಾಲಿ ರೈಡ್ ಮಾಡುವ ಸಲುವಾಗಿ ರಾತ್ರಿ 11ರ ಸಮಯದಲ್ಲಿ ಬನ್ನೇರುಘಟ್ಟ ಬಳಿಯ‌ ರಾಗಿಹಳ್ಳಿ ಬಳಿ ತೆರಳುವ ಸಮಯದಲ್ಲಿ ತೀವ್ರ ತಿರುವಿನಲ್ಲಿ ಅತಿ ವೇಗವಾಗಿ ಕಾರನ್ನು ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ದೌಡಾಯಿಸಿದ ಬನ್ನೇರುಘಟ್ಟ ಪೋಲಿಸರು ಮೃತ ವಿದ್ಯಾರ್ಥಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರ ಮಾಡಿದ್ದಾರೆ.