ಕುಣಿಗಲ್ ರಸ್ತೆಯ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಕಾರು ಅವಘಾತಕ್ಕೀಡಾಗಿದ್ದು, ಆ ಮಾರ್ಗದಲ್ಲಿ ಪ್ರಯಾಣ ಮಾಡುತ್ತಿದ್ದ ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡರು ತಕ್ಷಣ ಸ್ಪಂದಿಸಿ ಆಂಬುಲೆನ್ಸ್ ಕರೆಸಿಕೊಂಡು ಗಾಯಾಳುಗಳನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಲು ನೆರವಾದರು.

ಕನ್ನಡಪ್ರಭ ವಾರ್ತೆ ತುಮಕೂರುಕುಣಿಗಲ್ ರಸ್ತೆಯ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಕಾರು ಅವಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಆ ಮಾರ್ಗದಲ್ಲಿ ಪ್ರಯಾಣ ಮಾಡುತ್ತಿದ್ದ ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡರು ತಕ್ಷಣ ಸ್ಪಂದಿಸಿ ಆಂಬುಲೆನ್ಸ್ ಕರೆಸಿಕೊಂಡು ಗಾಯಾಳುಗಳನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಲು ನೆರವಾದರು. ದೇವರಾಯನದುರ್ಗದ ಕುಟುಂಬದವರು ಮೈಸೂರಿಗೆ ಪ್ರಯಾಣ ಮಾಡುತ್ತಿದ್ದರು. ಅವರಿದ್ದ ಕಾರು ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಶಾಸಕ ಸುರೇಶ್‌ಗೌಡರು ನೆರವಿಗೆ ಬಂದು ತಕ್ಷಣ ಆಂಬುಲೆನ್ಸ್‌ ಗೆ ಫೋನ್ ಮಾಡಿ ಕರೆಸಿಕೊಂಡು ಗಾಯಾಳುಗಳನ್ನು ನಗರದ ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ನಂತರ ಆಸ್ಪತ್ರೆಗೂ ಹೋಗಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸಲಹೆ ಮಾಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ಹೇಳಿದರು. ಚಿಕಿತ್ಸೆ ಪಡೆದು ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಸುರೇಶ್‌ಗೌಡರು ಹಾರೈಸಿದರು.