ಮಾವನೂರು ಬಳಿ ಕಾರು ಪಲ್ಟಿ

| Published : Aug 12 2024, 01:02 AM IST

ಸಾರಾಂಶ

ಆಲೂರು ತಾಲೂಕಿನ ಪಟ್ಟಣ ಗ್ರಾಮದ ಒಂದೇ ಕುಟುಂಬದವರು ತಮ್ಮ ಸಂಬಂಧಿಕರ ಮನೆಯಾದ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಹಿರೇಗೌಡನಹಳ್ಳಿ ಗ್ರಾಮಕ್ಕೆ ಶುಭಕಾರ್ಯಕ್ಕೆಂದು ತೆರಳಿ ಹಿಂದಿರುಗಿ ಬರುವಾಗ ಮಾವನೂರು ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪವಾಢ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಅಲ್ಪ ಸ್ವಲ್ಪ ಗಾಯವಾಗಿದ್ದು, ಉಳಿದ ಮೂವರು ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಆಲೂರು

ರಾಷ್ಟ್ರೀಯ ಹೆದ್ದಾರಿ 75ರ ಮಾವನೂರು ಗ್ರಾಮದ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ.

ಆಲೂರು ತಾಲೂಕಿನ ಪಟ್ಟಣ ಗ್ರಾಮದ ಒಂದೇ ಕುಟುಂಬದವರು ತಮ್ಮ ಸಂಬಂಧಿಕರ ಮನೆಯಾದ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಹಿರೇಗೌಡನಹಳ್ಳಿ ಗ್ರಾಮಕ್ಕೆ ಶುಭಕಾರ್ಯಕ್ಕೆಂದು ತೆರಳಿ ಹಿಂದಿರುಗಿ ಬರುವಾಗ ಮಾವನೂರು ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಪವಾಢ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಅಲ್ಪ ಸ್ವಲ್ಪ ಗಾಯವಾಗಿದ್ದು, ಉಳಿದ ಮೂವರು ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ.

ಕಾರು ಪಲ್ಟಿಯಾದ ಸದ್ದು ಕೇಳಿದ ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸುವಲ್ಲಿ ಸಹಕರಿಸಿದ್ದಾರೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿತ್ತು. ಸ್ಥಳಕ್ಕೆ ಆಲೂರು ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟು ಅಪಘಾತಕ್ಕೀಡಾಗಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಆಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಆಲೂರು ತಾಲೂಕಿನ ಪಟ್ಣ ಗ್ರಾಮದ ಸತೀಶ್ ನಾಯಕ, ರಾಜ ನಾಯಕ, ಪ್ರವೀಣ್ ಕಮಲಮ್ಮ, ವಿನುತಾ ಹಾಗೂ ಚಿಕ್ಕ ಮಕ್ಕಳಾದ ಪ್ರೀತಮ್, ಪಾಪು ಎಂದು ತಿಳಿದು ಬಂದಿದೆ.