ಕಾರು ಅಪಘಾತ: ಇಬ್ಬರ ಸಾವು

| Published : May 26 2024, 01:40 AM IST

ಸಾರಾಂಶ

ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸದ ಅಫಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಪುಂಡನಹಳ್ಳಿ ಗೇಟ್ ಬಳಿ ನಡೆದಿದೆ.

ಕನ್ನಡಪ್ರಭ ವಾರ್ತೆ, ಬೀರೂರು

ರಸ್ತೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಸಂಭವಿಸದ ಅಫಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡೂರು ತಾಲೂಕಿನ ಬೀರೂರು ಸಮೀಪದ ಪುಂಡನಹಳ್ಳಿ ಗೇಟ್ ಬಳಿ ನಡೆದಿದೆ.

ತುಮಕೂರು ಜಿಲ್ಲೆ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಹಾಗೂ ಕಾರು ಚಾಲಕ ಪೃಥ್ವಿ (26) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಮುರುಡೇಶ್ವರ ದೇವಸ್ಥಾನಕ್ಕೆಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಬೆಂಗಳೂರು-ಶಿವಮೊಗ್ಗ ರಾ.ಹೆದ್ದಾರಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯರಸ್ತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಹೆದ್ದಾರಿ ಪ್ರಾಧಿಕಾರದವರು ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿರಲಿಲ್ಲ ಎನ್ನಲಾಗಿದೆ. ಮುಖ್ಯ ರಸ್ತೆ ಬಂದ್ ಆಗಿದ್ದರಿಂದ ಬೈಪಾಸ್ ತಿರುವು ಪಡೆಯಲು ಹೋಗಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..