ಅಪಘಾತದ ತೀವ್ರತೆಗೆ ಪಿಕಪ್ ಚಾಲಕ ರವೀಂದ್ರ ನಾಯ್ಕ ಹಾಗೂ ಸಹ ಪ್ರಯಾಣಿಕ ಸುಬ್ರಾಯ ಕೃಷ್ಣ ಮೊಗೇರ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಕೇರಳ ಮೂಲದ ಫಾತಿಮಾ ಮರ್ವಾ, ಫಾತಿಮಾ ಎ.ಎ., ಅಫ್ರಾ, ಆಫ್ರಿದ್ ಮತ್ತು ರಿಮ್ಸಾ ಅವರಿಗೂ ಗಾಯಗಳಾಗಿವೆ.
ಭಟ್ಕಳ: ತಾಲೂಕಿನ ಮುಟ್ಟಳ್ಳಿ ಬೈಪಾಸ್ ಬ್ರಿಡ್ಜ್ ಸಮೀಪ ಕಾರು ಹಾಗೂ ಮಹೀಂದ್ರಾ ಬೊಲೆರೊ ಪಿಕಪ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಏಳು ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ.ಕೇರಳ ಮೂಲದ ಮಿಸ್ರಿಯಾ ಎಂಬವರು ಚಲಾಯಿಸುತ್ತಿದ್ದ ಕಾರು ಕುಂದಾಪುರ ಕಡೆಯಿಂದ ಭಟ್ಕಳದತ್ತ ಬರುತ್ತಿತ್ತು. ಈ ವೇಳೆ ಮುಟ್ಟಳ್ಳಿ ಬೈಪಾಸ್ ಸೇತುವೆ ಸಮೀಪ ಕಾರು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸಿದ ಪರಿಣಾಮ, ಎದುರಿನಿಂದ ಬರುತ್ತಿದ್ದ ಮಹೀಂದ್ರಾ ಬೊಲೆರೊ ಪಿಕಪ್ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದ ತೀವ್ರತೆಗೆ ಪಿಕಪ್ ಚಾಲಕ ರವೀಂದ್ರ ನಾಯ್ಕ ಹಾಗೂ ಸಹ ಪ್ರಯಾಣಿಕ ಸುಬ್ರಾಯ ಕೃಷ್ಣ ಮೊಗೇರ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಕೇರಳ ಮೂಲದ ಫಾತಿಮಾ ಮರ್ವಾ, ಫಾತಿಮಾ ಎ.ಎ., ಅಫ್ರಾ, ಆಫ್ರಿದ್ ಮತ್ತು ರಿಮ್ಸಾ ಅವರಿಗೂ ಗಾಯಗಳಾಗಿವೆ.ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಏರ್ಬ್ಯಾಗ್ಗಳು ತೆರೆದುಕೊಂಡಿವೆ. ಇದರಿಂದ ಕಾರಿನಲ್ಲಿದ್ದವರು ಸಂಭವನೀಯ ಭಾರಿ ಅನಾಹುತದಿಂದ ಪಾರಾಗಿದ್ದಾರೆ ಎನ್ನಲಾಗಿದೆ.ಗಾಯಾಳುಗಳನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಗಂಭೀರ ಗಾಯಗಳಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರಿಂದ 7 ಜಾನುವಾರುಗಳ ರಕ್ಷಣೆಭಟ್ಕಳ: ಜಾನುವಾರುಗಳನ್ನು ಸೂಕ್ತ ಆರೈಕೆ ಮಾಡದೆ, ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವನ್ನೂ ಒದಗಿಸದೆ ತೆಂಗಿನ ಮರಗಳಿಗೆ ಕಟ್ಟಿಹಾಕಿದ್ದ ಘಟನೆ ಪಟ್ಟಣದಲ್ಲಿ ಪತ್ತೆಯಾಗಿದೆ.ಈ ಸಂಬಂಧ ಭಟ್ಕಳ ನಗರ ಪೊಲೀಸರು ದಾಳಿ ನಡೆಸಿ ಏಳು ಜಾನುವಾರುಗಳನ್ನು ರಕ್ಷಿಸಿದ್ದು, ಒಂದು ಎತ್ತು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಪಟ್ಟಣದ ಮೈನುದ್ದೀನ್ ಸ್ಟ್ರೀಟ್ 2ನೇ ಕ್ರಾಸ್ನ ಬ್ಲಾಕ್ ಬಿ ಪ್ರದೇಶದಲ್ಲಿರುವ ಖಾಲಿ ಜಾಗದಲ್ಲಿ ಜಾನುವಾರುಗಳನ್ನು ಕಟ್ಟಿ ಹಾಕಲಾಗಿತ್ತು.