ಸಾರಾಂಶ
ಕಡೂರು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಸ್ತೆ ಮಧ್ಯೆ ಕಾರೊಂದು ಸುಟ್ಟು ಭಸ್ಮವಾದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.
ಕನ್ನಡಪ್ರಭ ವಾರ್ತೆ ,ಕಡೂರು
ಶಾರ್ಟ್ ಸರ್ಕ್ಯೂಟ್ ನಿಂದಾಗಿ ರಸ್ತೆ ಮಧ್ಯೆ ಕಾರೊಂದು ಸುಟ್ಟು ಭಸ್ಮವಾದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ನಡೆದಿದೆ.ಸರಸ್ವತಿಪುರ ಗೇಟ್ ಬಳಿ ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಸುಟ್ಟು ಕರಕಲಾಗಿದೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಬೂದಿಯಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಕೆಳಗಿಳಿದು ಪ್ರಾಣಪಾಯ ದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಕಡೂರು ಅಗ್ನಿ ಶಾಮಕ ಠಾಣೆ ಸಿಬ್ಬಂದಿ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟ ವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.9ಕೆಕೆಡಿಯು2. ಬೆಂಕಿಗೆ ಆಹುತಿ ಆಗಿರುವ ಕಾರು.