ಕಾರು-ಬಸ್ ಡಿಕ್ಕಿ: ಇಬ್ಬರ ಸಾವು

| Published : Nov 03 2023, 12:30 AM IST

ಸಾರಾಂಶ

ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರಳೂರು ಕೆರೆ ಏರಿ ಬಳಿ ನಡೆದಿದೆ.
ತುಮಕೂರು: ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರಳೂರು ಕೆರೆ ಏರಿ ಬಳಿ ನಡೆದಿದೆ. ತುಮಕೂರು ತಾಲೂಕು ಮಾನಂಗಿ ಗ್ರಾಮದ ನಿವಾಸಿ ಸುರೇಶ ಹಾಗೂ ಸುಮಾ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಬಸ್‌ನಲ್ಲಿ 10 ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಣಿಗಲ್‌ ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.