ಬೆಂಗಳೂರು ಕಡೆಯಿಂದ ಚಿಕ್ಕಬಳ್ಳಾಪುರದತ್ತ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಅಪಘಾತ । ವಾಹನ ಜಖಂ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಬುಧವಾರ ಸಂಜೆ ನಡೆದಿದೆ.

ದುರಂತದಲ್ಲಿ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಜಗದೀಶ್ ಹಾಗೂ ವೈಷ್ಣವ್ ಎಂಬುವವರ ಗುರುತು ಪತ್ತೆಯಾಗಿದ್ದು, ಇವರು ಬೆಂಗಳೂರಿನ ಯಲಹಂಕ ಮೂಲದವರು ಎಂದು ತಿಳಿದುಬಂದಿದೆ.

ಬೆಂಗಳೂರು ಕಡೆಯಿಂದ ಚಿಕ್ಕಬಳ್ಳಾಪುರದತ್ತ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿಕ್ಕಿಯ ರಭಸಕ್ಕೆ ಕಾರು ಮತ್ತು ಬೊಲೆರೋ ವಾಹನಗಳು ಸಂಪೂರ್ಣನುಜ್ಜು ಗುಜ್ಜಾಗಿದ್ದು. ಬೊಲೆರೊ ವಾಹನದಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸಿಕೆಬಿ-4 ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು