ಸಾರಾಂಶ
ಗೋಕಾಕ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮುಂದಿನ ಬೈಕ್ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ 12 ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.
ಗೋಕಾಕ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮುಂದಿನ ಬೈಕ್ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗೆ ಸರಣಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿ 12 ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಭವಿಸಿದೆ.
ನಗರದ ಪ್ರವಾಸಿ ಮಂದಿರದಿಂದ ನಾಕಾ ನಂ-1ರಲ್ಲಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ತೆರಳುತ್ತಿದ್ದ ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಇನ್ನುಳಿದ 12 ಜನರಿಗೆ ಕೈ, ಕಾಲು ಮುರಿದು ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ ಶಹರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.